ಸಂಸದೀಯ ನಾಯಕ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಅವರಿಗೆ ದೂರವಾಣಿ ಕರೆ ಮಾಡಿದ ಪ್ರಧಾನಿ ಮೋದಿ ಆರೋಗ್ಯ ವಿಚಾರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಂಡಿ ನೋವಿನಿಂದಾಗಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಖರ್ಗೆಯವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಇದೀಗ ಗುಣಮುಖರಾಗಿದ್ದು, ಶೀಘ್ರದಲ್ಲಿಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎನ್ನಲಾಗಿದೆ.
ಕಳೆದ ಕೆಲ ದಿನಗಳಿಂದ ಮಂಡಿನೋವಿನಿಂದಾಗಿ ಬಳಲುತ್ತಿದ್ದ ಖರ್ಗೆ,ನೋವು ಗುಣಮುಖವಾಗದ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.
ಹಿರಿಯ ಕಾಂಗ್ರೆಸ್ ನಾಯಕರು ಕೂಡಾ ಖರ್ಗೆಯವರನ್ನು ಭೇಟಿ ಮಾಡಿ ಆರೋಗ್ಯ ಕುಶಲೋಪರಿ ವಿಚಾರಿಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ವಕ್ತಾರರು ತಿಳಿಸಿದ್ದಾರೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.