ಪಾಕ್ ಜತೆ ಮಾತುಕತೆಗೆ ಪ್ರಧಾನಿ ಮೋದಿ ಸಿದ್ದ: ಸುಷ್ಮಾ ಸ್ವರಾಜ್

ಗುರುವಾರ, 3 ಆಗಸ್ಟ್ 2017 (19:51 IST)
ಪಾಕಿಸ್ತಾನದೊಂದಿಗೆ ಪ್ರಧಾನಿ ಮೋದಿ ಮಾತುಕತೆಗೆ ಮುಂದಾಗಿರುವುದು ಉತ್ತಮ ಬೆಳವಣಿಗೆ ಎಂದು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
 
ಸಂಸತ್ತಿನಲ್ಲಿ ಕಾಂಗ್ರೆಸ್ ಮುಖಂಡ ಆನಂದ್ ಶರ್ಮಾ ಭಾರತ-ಚೀನಾ ಗಡಿಯ ಉದ್ವಿಗ್ನ ಪರಿಸ್ಥಿತಿಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಶ್ರೀಲಂಕಾ, ಬಾಂಗ್ಲಾ ಸೇರಿದಂತೆ ನೆರೆಯ ರಾಷ್ಟ್ರಗಳೊಂದಿಗೆ ಬಾಂಧವ್ಯ ಮತ್ತಷ್ಟು ಉತ್ತಮವಾಗಿದೆ ಎಂದು ತಿಳಿಸಿದ್ದಾರೆ.
 
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಕಾಲದಲ್ಲಿರುವ ವಿದೇಶಾಂಗ ನೀತಿಯನ್ನು ಬಳಸಿಕೊಳ್ಳಲಾಗುತ್ತಿದೆ. ನೆರೆಯ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧ ಹೊಂದಲು ಸರಕಾರ ಬಯಸುತ್ತದೆ ಎಂದು ಉತ್ತರಿಸಿದ್ದಾರೆ.
 
ಪ್ರಧಾನಿ ಮೋದಿ ಪಾಕಿಸ್ತಾನಕ್ಕೆ ಭೇಟಿ ಕೊಟ್ಟಿದ್ದು ಉತ್ತಮ ಬೆಳವಣಿಗೆ. ನೆಹರು ಗಡಿಪರಿಸ್ಥಿತಿಯನ್ನು ಅರಿಯಲು ಚೀನಾ ಮೊರೆ ಹೋಗಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ