ನವದೆಹಲಿ: ಈಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಸರಳ ಬಹುಮತ ಪಡೆದಿದ್ದು, ಸರ್ಕಾರ ರಚಿಸಲು ಸಿದ್ಧತೆ ನಡೆಸಿದೆ. ಇಂದು ನವದೆಹಲಿಯಲ್ಲಿ ಸಂಸದೀಯ ಸಭೆ ನಡೆದಿದ್ದು ಅಲ್ಲಿ ಎನ್ಡಿಎಯ ಎಲ್ಲಾ ಸಂಸದರು ಒಕ್ಕೂರಲಿನಿಂದ ಮೋದಿಯನ್ನು ನಾಯಕನನ್ನಾಗಿ ಆಯ್ಕೆ ಮಾಡಿದರು.
ಸಭೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಸಂವಿಧಾನ ಸದನದಲ್ಲಿ ಸಂವಿಧಾನಕ್ಕೆ ನಮಸ್ಕರಿಸಿದರು. ಬಳಿಕ ಮಿತ್ರ ಪಕ್ಷಗಳ ಮುಖ್ಯಸ್ಥರಾದ ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ಹಾಗೂ ಎಚ್.ಡಿ. ಕುಮಾರಸ್ವಾಮಿ ಬಳಿ ಮಾತನಾಡಿದರು.
ಚುನಾವಣೆಯ ಸಮಯದಲ್ಲಿ ಪ್ರಧಾನಿ ಮೋದಿ ಸಂವಿಧಾನವನ್ನು ಬದಲಿಸಲು ಹೊರಟಿದ್ದಾರೆ ಎನ್ನುವ ಆರೋಪ ಕೇಳಿಬಂದಿತ್ತು. ಇದೀಗ ಪ್ರಧಾನಿ ಮೋದಿ ಸಂವಿಧಾನಕ್ಕೆ ನಮಸ್ಕರಿಸುವ ಮೂಲಕ ಅಂತಃ ಯಾವುದೇ ನಿರ್ಧಾರವಿಲ್ಲ ಎಂಬುದನ್ನು ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆ.
ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ, ನಿತಿನ್ ಗಡ್ಕರಿ ಮತ್ತು ಎನ್‌ಡಿಎ ಪಾಲುದಾರ ಟಿಡಿಪಿಯ ಚಂದ್ರಬಾಬು ನಾಯ್ಡು, ಜೆಡಿಯುನ ನಿತೀಶ್ ಕುಮಾರ್, ಶಿವಸೇನೆಯ ಏಕನಾಥ್ ಶಿಂಧೆ ಸೇರಿದಂತೆ ಇತರ ನಾಯಕರು ಭಾಗವಹಿಸಿದ್ದರು