ಭೋಪಾಲ್ : ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ದೇಶಾದ್ಯಂತ 5 ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಒಂದೇ ಸಮಯದಲ್ಲಿ ಹಸಿರು ನಿಶಾನೆ ತೋರಿದ್ದಾರೆ.
ಮಧ್ಯಪ್ರದೇಶದ ಭೋಪಾಲ್ನ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣದಿಂದ ಮೋದಿ ಬೆಳಗ್ಗೆ 11 ಗಂಟೆಗೆ ಹೊಸ 5 ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ್ದಾರೆ.
ರಾಣಿ ಕಮಲಾಪತಿ-ಜಬಲ್ಪುರ್ ವಂದೇ ಭಾರತ್ ಎಕ್ಸ್ಪ್ರೆಸ್, ಖಜುರಾಹೊ-ಭೋಪಾಲ್-ಇಂದೋರ್ ವಂದೇ ಭಾರತ್ ಎಕ್ಸ್ಪ್ರೆಸ್, ಮಡಗಾಂವ್ (ಗೋವಾ)-ಮುಂಬೈ ವಂದೇ ಭಾರತ್ ಎಕ್ಸ್ಪ್ರೆಸ್, ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ಹಾಗೂ ಹತಿಯಾ-ಪಾಟ್ನಾ ವಂದೇ ಭಾರತ್ ಎಕ್ಸ್ಪ್ರೆಸ್ ಎಂಬ 5 ರೈಲುಗಳಿಗೆ ಮೋದಿ ಚಾಲನೆ ನೀಡಿದ್ದಾರೆ.