ಮಿಸೈಲ್ ಮ್ಯಾನ್ ಡಾ.ಎಪಿಜೆ ಅಬ್ದುಲ್ ಕಲಾಂ ಸ್ಮಾರಕ ಲೋಕಾರ್ಪಣೆ

ಗುರುವಾರ, 27 ಜುಲೈ 2017 (13:46 IST)
ರಾಮೇಶ್ವರಂ:ಮಾಜಿ ರಾಷ್ಟ್ರಪತಿ, ಭಾರತ ರತ್ನ , 'ಮಿಸೈಲ್ ಮ್ಯಾನ್' ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆ ಮಾಡಿದ್ದಾರೆ.
 
ರಾಮೇಶ್ವರಂನ ಪೈಕರುಂಬ್‌ ನಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ ಡಿಒ) ನಿರ್ಮಿಸಿರುವ ಅಬ್ದುಲ್ ಕಲಾಂ ಅವರ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದು, ಇಂದು ಕಲಾಂ ಅವರ 2ನೇ  ಪುಣ್ಯತಿಥಿಯ ಸಂದರ್ಭದಲ್ಲಿ ಸ್ಮಾರಕವನ್ನು ದೇಶಕ್ಕೆ ಸಮರ್ಪಿಸಿದರು.
 
ಒಟ್ಟು 50 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಸ್ಮಾರಕ ಒಟ್ಟು 27 ಸಾವಿರ ಚದರಡಿ ವಿಸ್ತೀರ್ಣದಲ್ಲಿ ನಿರ್ಮಾಣ ಮಾಡಲಾಗಿದೆ. ಇದೇ ವೇಳೆ ಪ್ರಧಾನಿ, ಡಾ.ಎಪಿಜೆ ಅಬ್ದುಲ್ ಕಲಾಂ ಇಂಟರ್ ನ್ಯಾಷನಲ್ ಫೌಂಡೇಷನ್ ನಿರ್ಮಿಸಿರುವ ’ಕಲಾಂ 2020 ವಿಜ್ನಾನ ವಾಹನ’ ಮೊಬೈಲ್ ಮ್ಯೂಸಿಯಂಗೂ ಚಾಲನೆ ನೀಡಿದ್ದಾರೆ.
 

ವೆಬ್ದುನಿಯಾವನ್ನು ಓದಿ