ಪ್ರಧಾನಿ ನರೇಂದ್ರ ಮೋದಿ ವಿಶ್ವಾಸಾರ್ಹ ನಾಯಕ

ಸೋಮವಾರ, 3 ಜುಲೈ 2023 (20:53 IST)
ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ್ದರ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್​.ಜೈಶಂಕರ್​​ ಪ್ರತಿಕ್ರಿಯೆ ನೀಡಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಅಮೆರಿಕಾಕ್ಕೆ ಹಲವು ದೇಶಗಳ ಪ್ರಧಾನಿಗಳು ಭೇಟಿ ನೀಡಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಮಾತ್ರ ವಿಶೇಷವಾಗಿ ಕಾಣುತ್ತಾರೆ. ಎಲ್ಲಾ ಪ್ರಧಾನಿಗಳಿಗಿಂತ ನರೇಂದ್ರ ಮೋದಿಯವರಿಗೆ ವಿಭಿನ್ನ ಚಿತ್ರಣವಿದೆ ಎಂದಿದ್ದಾರೆ.. ಪ್ರಧಾನಿ ನರೇಂದ್ರ ಮೋದಿಯವರು ಹಿರಿಯರು, ಅನುಭವಿ, ವಿಶ್ವಾಸಾರ್ಹ ನಾಯಕರಾಗಿದ್ದಾರೆ. ನರೇಂದ್ರ ಮೋದಿಯವರು ಯಾವುದೇ ಒಂದು ಸ್ಥಾನವನ್ನು ಸ್ವೀಕರಿಸಿದ್ರೆ, ಅದು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಭಾವ ಬೀರುತ್ತದೆ. ಅವರು ಪ್ರಧಾನಿಯಾಗಿ ಸೇವೆ ಸಲ್ಲಿಸಿದ 9 ವರ್ಷದ ಅವಧಿಯಲ್ಲಿ ಹಲವು ಮಹತ್ವದ ಬದಲಾವಣೆಗಳನ್ನು ನೋಡಿದ್ದೇವೆ ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ