ಪ್ರಧಾನಿ ನರೇಂದ್ರ ಮೋದಿ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಅವಾರ್ಡ್

ಬುಧವಾರ, 2 ಆಗಸ್ಟ್ 2023 (08:29 IST)
ಮಹಾರಾಷ್ಟ್ರ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಂಗಳವಾರ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಮೊತ್ತದ 1 ಲಕ್ಷ ರೂ.ಗಳನ್ನು ನಮಾಮಿ ಗಂಗೆ ಯೋಜನೆಗೆ ನೀಡುವುದಾಗಿ ಮೋದಿ ಘೋಷಿಸಿದ್ದಾರೆ.
 
ಪುಣೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ತಿಲಕ್ ಅವರ ಹೆಸರಿನ ಪ್ರಶಸ್ತಿಯನ್ನು ಸ್ವೀಕರಿಸಿರುವುದು ನನಗೆ ಗೌರವ ತಂದಿದೆ. ಪ್ರಶಸ್ತಿಯ ಹಣವನ್ನು ನಮಾಮಿ ಗಂಗೆ ಯೋಜನೆಗೆ ನೀಡಲು ನಿರ್ಣಯಿಸಿದ್ದೇನೆ ಎಂದು ತಿಳಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ