ನ. 2 ರಂದು ಪ್ರಧಾನಿ ಮೋದಿ ರಾಜ್ಯಕ್ಕೆ : ಚುನಾವಣೆ ಪ್ರಚಾರಕ್ಕೆ ಚಾಲನೆ
ಸೋಮವಾರ, 18 ಸೆಪ್ಟಂಬರ್ 2017 (17:31 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ನವೆಂಬರ್ 2 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಪ್ರಧಾನಿ ಮೋದಿ ನವೆಂಬರ್ 2 ರಂದು ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ ನಂತರ ಪ್ರಚಾರ ಕಾರ್ಯ ಆರಂಭವಾಗಲಿವೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.
ಪ್ರಧಾನಿ ಮೋದಿಯವರ ವೇಳಾಪಟ್ಟಿ ಸಿದ್ದವಾಗಿದ್ದು, ಚುನಾವಣೆ ಸಂದರ್ಭದಲ್ಲಿ 20-25 ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಪ್ರತಿಷ್ಠೆಯ ವಿಷಯವಾಗಿ ಪರಿಗಣಿಸಿದ್ದು, ಚುನಾವಣೆಯಲ್ಲಿ ಜಯಭೇರಿ ಬಾರಿಸಿ ಸರಕಾರ ರಚಿಸಲೇಬೇಕು ಎನ್ನುವ ಫರ್ಮಾನ್ ಹೊರಡಿಸಿದ್ದಾರೆ ಎನ್ನಲಾಗುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.