ಕಾಶ್ಮೀರದ ಕಣಿವೆ ರಾಜ್ಯದ ಕುರಿತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ

ಸೋಮವಾರ, 5 ಆಗಸ್ಟ್ 2019 (10:19 IST)
ನವದೆಹಲಿ : ಜಮ್ಮು-ಕಾಶ್ಮೀರದಲ್ಲಿ ಪ್ರಕ್ಷುಬ್ಧ ವಾತವಾರಣ ನಿರ್ಮಾಣದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರವು ಇಂದು ಬೆಳಗ್ಗೆ ಸಚಿವ ಸಂಪುಟ ಸಭೆ ಕರೆದಿದೆ.
ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆಯಲ್ಲಿ ಕಾಶ್ಮೀರದ ಕಣಿವೆ ರಾಜ್ಯದ ಪ್ರಸ್ತುತ ಪರಿಸ್ಥಿತಿಯ ಕುರಿತು ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಿದ್ದಾರೆ.


ಈ ಪ್ರಧಾನಿ ಮೋದಿ ನಿವಾಸದಲ್ಲಿ ಕರೆದ ಸಭೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ, ರಾಜ್ ನಾಥ್ ಸಿಂಗ್, ವಿತ್ತ ಸಚಿವೆ ನಿರ್ಮಲಾ ಸೀತಾರಾಮ್,  ಸೇರಿದಂತೆ ಹಲವು ಕೇಂದ್ರ ಸಚಿವರು ಉಪಸ್ಥಿತರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ