ಶಹದೋಲ್ ಜಿಲ್ಲೆಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಶನಿವಾರ, 1 ಜುಲೈ 2023 (13:04 IST)
ಮಧ್ಯಪ್ರದೇಶದ ಶಹದೋಲ್ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ(ಜುಲೈ1)ಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಪ್ರದೇಶ ಬಿಜೆಪಿ ಪ್ರಕಾರ ಮೋದಿ ಅವರು ‘ರಾಣಿ ದುರ್ಗಾವತಿ ಗೌರವ್ ಯಾತ್ರೆ’ ಕಾರ್ಯಕ್ರಮ ಮತ್ತು ನ್ಯಾಷನಲ್ ಸಿಕಲ್ ಸೆಲ್ ಅನೇಮಿಯಾ ನಿವಾರಣೆ ಮಿಷನ್ಅನ್ನು ಪ್ರಾರಂಭಿಸುವುದು ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಆ
 
ಯುಷ್ಮಾನ್ ಕಾರ್ಡ್ಗಳ ವಿತರಣೆ ಸೇರಿದಂತೆ ಪ್ರಧಾನಿ ಮೋದಿ ಭಾಗವಹಿಸುವ ಕಾರ್ಯಕ್ರಮಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ರಾಜ್ಯ ಬಿಜೆಪಿಯ ಹಿರಿಯ ಕಾರ್ಯಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಧಾನಮಂತ್ರಿಯವರು ಶಾಹದೋಲ್ ಜಿಲ್ಲೆಯ ಪಕಾರಿಯಾ ಗ್ರಾಮಕ್ಕೆ ಭೇಟಿ ನೀಡಲಿದ್ದು ಗ್ರಾಮದ ವಿವಿಧ ಜನರೊಂದಿಗೆ ಸಂವಾದ ನಡೆಸಲಿದ್ದಾರೆ. ರಾಜ್ಯಾದ್ಯಂತ ಸುಮಾರು 3.57 ಕೋಟಿ ಫಲಾನುಭವಿಗಳಿಗೆ ಆಯುಷ್ಮಾನ್ ಕಾರ್ಡ್ಗಳ ವಿತರಣೆಯನ್ನು ಕೂಡಾ ಮೋದಿ ಮಾಡಲಿದ್ದಾರೆ.ಆಯುಷ್ಮಾನ್ ಕಾರ್ಡ್ ವಿತರಣೆ ಸಮಾರಂಭವನ್ನು ರಾಜ್ಯಾದ್ಯಂತ ನಗರ ಸಂಸ್ಥೆಗಳು, ಗ್ರಾಮ ಪಂಚಾಯಿತಿಗಳು ಮತ್ತು ಅಭಿವೃದ್ಧಿ ಬ್ಲಾಕ್ಗಳಲ್ಲಿ ಆಯೋಜಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ