ವಾರಾಣಸಿ : ಪ್ರಧಾನಿ ನರೇಂದ್ರ ಮೋದಿ ಇಂದು ವಾರಾಣಸಿಯಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಅಭಿಯಾನ ಆರೋಗ್ಯ ರಕ್ಷಣೆಯ ಮೂಲಸೌಕರ್ಯವನ್ನು ಬಲಪಡಿಸುವ ಅತಿದೊಡ್ಡ ಪ್ಯಾನ್-ಇಂಡಿಯಾ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆ ಭಾರತದ ಆರೋಗ್ಯ ಸೌಲಭ್ಯಗಳಿಗೆ ಹೊಸ ಶಕ್ತಿ ಹಾಗೂ ಅಭಿವೃದ್ಧಿಯನ್ನು ತುಂಬುತ್ತದೆ ಎಂದು ಮೋದಿ ಭರವಸೆ ನೀಡಿದ್ದಾರೆ.
ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪದೇ ಪದೆ ಉತ್ತರ ಪ್ರದೇಶದ ಪ್ರವಾಸ ಕೈಗೊಳ್ಳುತ್ತಿರುವ ನರೇಂದ್ರ ಮೋದಿ ಈ ಬಾರಿಯ ಉತ್ತರ ಪ್ರದೇಶ ಪ್ರವಾಸದಲ್ಲಿ ಸಾಲು ಸಾಉ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇಂದು ಬೆಳಗ್ಗೆ ಉತ್ತರ ಪ್ರದೇಶದಲ್ಲಿ ಒಂಬತ್ತು ವೈದ್ಯಕೀಯ ಕಾಲೇಜುಗಳನ್ನು ಉದ್ಘಾಟಿಸಿದ ಅವರು ಬಳಿಕ ಆಯುಷ್ಮಾನ್ ಭಾರತ ಆರೋಗ್ಯ ಮೂಲಸೌಕರ್ಯ ಮಿಷನ್ಗೆ ಚಾಲನೆ ನೀಡಿದ್ದಾರೆ. ವಾರಣಾಸಿಗಾಗಿ ಒಟ್ಟು 5,200 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಮೋದಿ ಉದ್ಘಾಟಿಸಿದ್ದಾರೆ.