ಪ್ರಧಾನಿಯವರ ಮೊದಲ ವಿದೇಶಿ ಪ್ರವಾಸ! ಯಾವುದು?

ಸೋಮವಾರ, 2 ಮೇ 2022 (08:56 IST)
ನವದೆಹಲಿ : ಮೂರು ರಾಷ್ಟ್ರಗಳ ನಿರ್ಣಾಯಕ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರಮೋದಿ ಅವರು,
 
ಯುರೋಪಿಯನ್ ಪಾಲುದಾರರೊಂದಿಗೆ ಶಾಂತಿ, ಸಮೃದ್ಧಿಗಾಗಿ ಸಹಕಾರದ ಮನೋಭಾವ ಬಲಪಡಿಸಲು ಹಾಗೂ ಕೋವಿಡ್ ಆರ್ಥಿಕ ಚೇತರಿಕೆಯನ್ನು ಬಲಪಡಿಸಲು ಬರ್ಲಿನ್, ಕೋಪನ್ ಹೇಗನ್ ಮತ್ತು ಪ್ಯಾರಿಸ್ ಪ್ರವಾಸಕ್ಕೆ ತೆರಳುತ್ತಿದ್ದಾರೆ.

ಅವರಿಂದು ಜರ್ಮನಿಯ ಫೆಡರಲ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರ ಆಹ್ವಾನದ ಮೇರೆಗೆ ಜರ್ಮನಿಯ ಬರ್ಲಿನ್ಗೆ ಭೇಟಿ ನೀಡಿದ್ದಾರೆ. ಇದರೊಂದಿಗೆ ಡೆನ್ಮಾರ್ಕ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸೆನ್ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನೂ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. 

ಪ್ರವಾಸಕ್ಕೂ ಮುನ್ನ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಭಾನುವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತವು ಅನೇಕ ಸವಾಲುಗಳನ್ನು ಎದುರಿಸುತ್ತಿರುವ ಸಮಯದಲ್ಲಿ ಯುರೋಪ್ ಪ್ರವಾಸ ಮಾಡುತ್ತಿದ್ದೇನೆ ಎಂದಿದ್ದಾರೆ ಎಂದು ಹೇಳಿದೆ.

ನಂತರ ಅವರು ಮೇ 3 ರಿಂದ 4 ಡೆನ್ಮಾರ್ಕ್ನ ಕೋಪನ್ಹೇಗನ್ಗೆ ಪ್ರಯಾಣಿಸಲಿದ್ದಾರೆ. ಭಾರತಕ್ಕೆ ಹಿಂತಿರುಗುವ ವೇಳೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಲಿದ್ದಾರೆ. ಇದು 2022ರಲ್ಲಿ ಪ್ರಧಾನಿಯವರ ಮೊದಲ ವಿದೇಶಿ ಪ್ರವಾಸವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ