ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಜಿ20 ಶೃಂಗಸಭೆಯಲ್ಲಿ ಮಾತನಾಡಲಿದ್ದಾರೆ.
ಕೊರೊನಾ ಸಾಂಕ್ರಾಮಿಕದಿಂದ ಜಾಗತಿಕ ಆರ್ಥಿಕ ಮತ್ತು ಆರೋಗ್ಯ ಚೇತರಿಕೆ, ಸುಸ್ಥಿರ ಅಭಿವೃದ್ಧಿ ಮತ್ತು ಹವಾಮಾನ ಬದಲಾವಣೆ ಎಂಬ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ನರೇಂದ್ರ ಮೋದಿಯವರು ನಿನ್ನೆ ರೋಮ್ಗೆ ತೆರಳಿದ ಬಳಿಕ ಮೊದಲು ಮಹಾತ್ಮ ಗಾಂಧಿ ಪ್ರತಿಮೆಗೆ ಗೌರವ ಸಲ್ಲಿಸಿದ್ದಾರೆ. ಬಳಿಕ ಟ್ವೀಟ್ ಮಾಡಿ, ಲಕ್ಷಾಂತರ ಜನರಿಗೆ ಸ್ಫೂರ್ತಿಯ ಸೆಲೆಯಾಗಿರುವ ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಲು ನನಗೆ ರೋಮ್ನಲ್ಲಿ ಅವಕಾಶ ಸಿಕ್ಕಿದೆ ಎಂದು ಹೇಳಿದ್ದರು. ಅವರು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಚಾರ್ಲ್ಸ್ ಮೈಕೆಲ್ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷ ಉರ್ಸುಲಾ ವಾನ್ ಡೆರ್ ಲೇಯೆನ್ರೊಂದಿಗೆ ಕೂಡ ಮಾತುಕತೆ ನಡೆಸಿದರು.