ಖಾಸಗಿ ಚಾನೆಲ್ಲೊಂದು ಆಪ್ ಗೆಲುವಿಗೆ ಪರೋಕ್ಷ ಸಹಕಾರ ನೀಡುತ್ತಿದೆ: ಶಾ

ಶನಿವಾರ, 24 ಜನವರಿ 2015 (14:27 IST)
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆಯಲು ಖಾಸಗಿ ಹಿಂದಿ ಚಾನಲ್ಲೊಂದು ಆಮ್ ಆದ್ಮಿ ಪಕ್ಷಕ್ಕೆ ಸಹಕಾರ ನೀಡುತ್ತಿರುವುದರಿಂದ ಮತದಾರರು ಎಚ್ಚರಿಕೆಯಿಂದಿರಬೇಕು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆರೋಪಿಸಿದ್ದಾರೆ.
 
ಖಾಸಗಿ ಚಾನೆಲ್ಲೊಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹಾಗೂ ಪಕ್ಷದ ಇತರ ಮುಖಂಡರ ಗೆಲುವಿಗೆ ಸಹಕಾರ ನೀಡುತ್ತಿದೆ. ಮಾಧ್ಯಮಗಳ ಕೀಳುಮಟ್ಟಕ್ಕೆ ಇಳಿದಿದೆ ಎನ್ನುವುದಕ್ಕೆ ಇದಕ್ಕಿಂತ ಮತ್ತೊಂದು ಉದಾಹರಣೆ ಬೇಕಾಗಿಲ್ಲ ಎಂದು ಕಿಡಿಕಾರಿದ್ದಾರೆ.
 
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸಿಎಂ ಅಭ್ಯರ್ಥಿಯಾಗಿ ಕಿರಣ್ ಬೇಡಿಯವರನ್ನು ಯಾಕೆ ಆಯ್ಕೆ ಮಾಡಲಾಯಿತು ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಶಾ, ಖಾಸಗಿ ಚಾನೆಲ್‌ಗಳು ಕೇಜ್ರಿವಾಲ್ ಕೈಗೊಂಬೆಯಾಗಿವೆ ಎಂದು ತಿರುಗೇಟು ನೀಡಿದ್ದಾರೆ. 
 
ಕಿರಣ್ ಬೇಡಿಯವರನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳಿಸಿರುವುದನ್ನು ಸಮರ್ಥಿಸಿಕೊಂಡ ಅವರು, ವಿಭಿನ್ನ ಕ್ಷೇತ್ರಗಳಲ್ಲಿ ಉತತ್ಮ ಸಾಧನೆಗೈದವರನ್ನು ಪಕ್ಷಕ್ಕೆ ಬರಮಾಡಿಕೊಲ್ಳುವುದು ಪಕ್ಷದ ಸಿದ್ಧಾಂತವಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ.
 

ವೆಬ್ದುನಿಯಾವನ್ನು ಓದಿ