ಯೋಗಿ ವಿರುದ್ಧ ಪ್ರಿಯಾಂಕಾ ವಾಗ್ದಾಳಿ?

ಶುಕ್ರವಾರ, 11 ಫೆಬ್ರವರಿ 2022 (07:41 IST)
ಲಕ್ನೋ : ಬಿಜೆಪಿ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ಮುಖ್ಯಮಂತ್ರಿಗಳು ಜನರನ್ನು ತಣ್ಣಗಾಗಿಸುವ ಬಗ್ಗೆ ಮಾತನಾಡುವ ಬದಲು ಉದ್ಯೋಗಾವಕಾಶಗಳನ್ನು ಹೆಚ್ಚಿಸಬೇಕು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 

ರಾಂಪುರದಲ್ಲಿ ಚುನಾವಣಾ ಪ್ರಚಾರವನ್ನು ಉದ್ದೇಶಿಸಿ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ವ್ಯಾಪಾರ ಮತ್ತು ವ್ಯವಹಾರಗಳನ್ನು ಕೆಟ್ಟ ನೀತಿಗಳಿಂದ ನಾಶಪಡಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಯೋಗಿ ಆದಿತ್ಯನಾಥ್ ಅವರು ‘ಗರ್ಮಿ ನಿಕಾಲ್ ದೆಂಗೆ’, ಚರ್ಬಿ ನಿಕಾಲ್ ದೆಂಗೆ’ ಎಂದು ಹೇಳುತ್ತಲೇ ಇರುತ್ತಾರೆ. ಈ ಸಮಸ್ಯೆಗಳು ಜನರನ್ನು ಕಾಡುತ್ತಿವೆಯೇ? ಐದು ವರ್ಷಗಳ ಕಾಲ ಅಧಿಕಾರದಲ್ಲಿರುವ ಅವರು ಖಾಲಿ ಕೈನಲ್ಲಿರುವವರಿಗೆ ಏಕೆ ಉದ್ಯೋಗಾವಕಾಶಗಳನ್ನು ಕಲ್ಪಿಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. 

ಮತದಾರರು ರಾಜಕಾರಣಿಗಳ ಮಾತನ್ನು ಆಲಿಸಿ, ಅವರು ಜನರ ಅಭಿವೃದ್ಧಿ ಮತ್ತು ಕಲ್ಯಾಣದ ಬಗ್ಗೆ ಮಾತನಾಡುತ್ತಾರೆ ಅಂತ ತಿಳಿದುಕೊಂಡಿರುತ್ತಾರೆ.

ಎಲ್ಲಾ ಸಣ್ಣ ಮತ್ತು ಮಧ್ಯಮ ಪ್ರಮಾಣದ ವ್ಯವಹಾರಗಳು ಮತ್ತು ಉತ್ಪಾದನಾ ಘಟಕಗಳು ಉದ್ಯೋಗಗಳನ್ನು ಸೃಷ್ಟಿಸುತ್ತವೆ. ಆದರೆ ಸರ್ಕಾರವು ನೋಟು ಅಮಾನ್ಯೀಕರಣದಿಂದ ಈ ವಲಯವನ್ನು ದುರ್ಬಲಗೊಳಿಸಿದೆ ಎಂದು ಕಿಡಿಕಾರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ