ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಪ್ರಿಯಾಂಕಾ ಗಾಂಧಿಗೆ ಕೇಂದ್ರ ಸರ್ಕಾರದಿಂದ ನೋಟಿಸ್

ಗುರುವಾರ, 2 ಜುಲೈ 2020 (10:22 IST)
ನವದೆಹಲಿ : ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ದೆಹಲಿಯ ಲೋಧಿ ರೋಡ್ ನಲ್ಲಿರುವ ನಂ.35 ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಕೇಂದ್ರ ಸರ್ಕಾರ ನೋಟಿಸ್ ನೀಡಿದೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರಿಗೆ ನೀಡಿದ್ದ ಎಸ್ ಪಿಜಿ ಭದ್ರತೆಯನ್ನು ಈ ಹಿಂದೆ ಸರ್ಕಾರ ಹಿಂಪಡೆದಿತ್ತು. ಇದೀಗ ಈ ಭದ್ರತೆ ಇಲ್ಲದ ಕಾರಣ ಸರ್ಕಾರಿ ಮನೆ ಖಾಲಿ ಮಾಡುವಂತೆ ಕೇಂದ್ರ ಸರ್ಕಾರ ಪತ್ರ ಬರೆದಿದೆ.

ಆಗಸ್ಟ್ 1 ರೊಳಗೆ ಮನೆ ಖಾಲಿ ಮಾಡಲು ತಿಳಿಸಿದ ಸರ್ಕಾರ ಅದಕ್ಕೂ ಮುನ್ನ ನಿವಾಸಕ್ಕೆ ಸಂಬಂಧಿಸಿದ ಬಿಲ್ ಗಳನ್ನು ಪಾವತಿ ಮಾಡುವಂತೆ ಸೂಚಿಸಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ