ಡೆಂಗ್ಯೂನಿಂದ ಗುಣಮುಖರಾದ ಪ್ರಿಯಾಂಕಾ ಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್
ಬುಧವಾರ, 30 ಆಗಸ್ಟ್ 2017 (19:31 IST)
ಡೆಂಗ್ಯೂ ಜ್ವರದ ಚಿಕಿತ್ಸೆಗಾಗಿ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ, ಗುಣಮುಖರಾಗಿದ್ದರಿಂದ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರಿಯಾಂಕಾ ವಾದ್ರಾ ಅವರಿಗೆ ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ಶ್ರಮದ ಕೆಲಸ ಮಾಡದಂತೆ ಸಲಹೆ ನೀಡಲಾಗಿದೆ" ಎಂದು ಆಸ್ಪತ್ರೆಯ ವೈದ್ಯರಾದ ಡಾ. ಡಿ. ಎಸ್. ರಾಣಾ ತಿಳಿಸಿದ್ದಾರೆ.
ಆಗಸ್ಟ್ 23 ರಂದು ಸರ್ ಗಂಗಾರಾಮ್ ಆಸ್ಪತ್ರೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಡೆಂಗ್ಯೂಗೆ ಚಿಕಿತ್ಸೆ ಪಡೆಯುತ್ತಿದ್ದರು. ದೆಹಲಿಯಲ್ಲಿ ಆಗಸ್ಟ್ 19 ರವರೆಗೆ 657 ಜನರು ಡೆಂಗ್ಯೂ, ಚಿಕನ್‌ಗುನ್ಯ ಮತ್ತು ಮಲೇರಿಯಾ ರೋಗಗಳಿಂದ ಬಳಲುತ್ತಿದ್ದಾರೆ ಮುನ್ಸಿಪಲ್ ಕಾರ್ಪೋರೇಶನ್ ವರದಿಯಲ್ಲಿ ತಿಳಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.