ಡೆಂಗ್ಯೂ ಜ್ವರದಿಂದ ಬಳಲುತ್ತಿರುವ ಪ್ರಿಯಾಂಕಾ ಗಾಂಧಿ ಆಸ್ಪತ್ರೆಗೆ ದಾಖಲು

ಶನಿವಾರ, 26 ಆಗಸ್ಟ್ 2017 (13:56 IST)
ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದು  ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.
ಸರ್ ಗಂಗಾರಾಮ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಪ್ರಿಯಾಂಕಾ ಗಾಂಧಿಯವರಿಗೆ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.
 
ಪ್ರಿಯಾಂಕಾ ವಾದ್ರಾ ಆರಂಭದಲ್ಲಿ ಜ್ವರದಿಂದ ಬಳಲುತ್ತಿದ್ದರು. ನಂತರ ಕೆಲ ಪರೀಕ್ಷೆಗಳ ನಂತರ ಅವರು ಡೆಂಗ್ಯೂನಿಂದ ಬಳಲುತ್ತಿರುವದು ದೃಢವಾಯಿತು ಎಂದು ಸರ್ ಗಂಗಾರಾಮ್ ಆಸ್ಪತ್ರೆಯ ವೈದ್ಯರಾದ ಡಿ.ಎಸ್.ರಾಣಾ ತಿಳಿಸಿದ್ದಾರೆ. 
 
ಇಲ್ಲಿಯವರೆಗೆ, ಕನಿಷ್ಠ 325 ಡೆಂಗ್ಯೂ ಪ್ರಕರಣಗಳು ಈ ವರ್ಷ ದೆಹಲಿಯಲ್ಲಿ ವರದಿಯಾಗಿವೆ. ಕಳೆದ ವರ್ಷಕ್ಕಿಂತ ಇದು ಎರಡು ಪಟ್ಟು (162) ಹೆಚ್ಚಾಗಿದೆ.
 
2016 ರಲ್ಲಿ ಒಟ್ಟು 4,431 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ, ಅವುಗಳಲ್ಲಿ 10 ಸಾವುಗಳು ಸಂಭವಿಸಿವೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ