ಕಾಂಗ್ರೆಸ್ ನಾಯಕಿ ಪ್ರಿಯಾಂಕ ವಾದ್ರಾ ಕಾರು ಅಪಘಾತ

ಗುರುವಾರ, 4 ಫೆಬ್ರವರಿ 2021 (09:50 IST)
ಲಕ್ನೋ: ಕಾಂಗ್ರೆಸ್ ನಾಯಕಿ ಪ್ರಿಯಾಂಕ ವಾದ್ರಾ ಅವರ ಕಾವಲುಪಡೆಯ ನಾಲ್ಕು ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.


ದೆಹಲಿಯ ರೈತ ಪ್ರತಿಭಟನೆ ವೇಳೆ ಸಾವನ್ನಪ್ಪಿದ ನವ್ರೀತ್ ಸಿಂಗ್ ಕುಟುಂಬಸ್ಥರನ್ನು ಭೇಟಿ ಮಾಡಲು ಪ್ರಿಯಾಂಕಾ ತಮ್ಮ ಬೆಂಗಾವಲು ಪಡೆಯೊಂದಿಗೆ ತೆರಳುತ್ತಿದ್ದಾಗ  ಈ ಘಟನೆ ಸಂಭವಿಸಿದೆ. ಆದರೆ ಈ ಕಾರುಗಳಲ್ಲಿ ಪ್ರಿಯಾಂಕ ಇರಲಿಲ್ಲ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ