ಪಾಕಿಸ್ತಾನ ಪರ ಬೇಹುಗಾರಿಕೆ ಮಾಡಲು ಹೋಗಿ ಇದೀಗ ತನಿಖೆ ಎದುರಿಸುತ್ತಿರುವ ಹರಿಯಾಣ ಮೂಲದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಅವರು ಮೂರು ಪಾಕಿಸ್ತಾನಿ ಗುಪ್ತಚರ ಹ್ಯಾಂಡ್ಲರ್‌ಗಳೊಂದಿಗೆ ಸಂಪರ್ಕದಲ್ಲಿರುವುದನ್ನು ಒಪ್ಪಿಕೊಂಡಿದ್ದಾಳೆ.
ಈ ವಿಷಯದಲ್ಲಿ ತನಗೆ ಯಾವುದೇ ಪಶ್ಚಾತ್ತಾಪವಿಲ್ಲ ಎಂದು ಬಾಯ್ಬಿಟ್ಟಿದ್ದಾಳೆ. ಪಾಕಿಸ್ತಾನ ಮತ್ತು ಭಾರತ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದ್ದ ಹಾಗೇ ಪಾಕಿಸ್ತಾನಕ್ಕೆ ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ಹರಿಯಾಣದ ಜ್ಯೋತಿಯನ್ನು ವಶಕ್ಕೆ ಪಡೆಯಲಾಯಿತು.
ಉನ್ನತ ಮಟ್ಟದ ಪೊಲೀಸ್ ವಿಚಾರಣೆಯ ಸಮಯದಲ್ಲಿ ಪಾಕಿಸ್ತಾನದ ಮೂವರೊಂದಿಗೆ ಸಂಪರ್ಕದಲ್ಲಿರುವುದಾಗಿ ಹಾಗೂ ಈ ವಿಷಯದಲ್ಲಿ ಯಾವುದೇ ಪಶ್ಚಾತ್ತಾಪವಿಲ್ಲ ಎಂದು ಹೇಳಿಕೊಂಡಿದ್ದಾಳೆ.
ಅಧಿಕೃತ ರಹಸ್ಯ ಕಾಯಿದೆ ಮತ್ತು ಭಾರತೀಯ ನ್ಯಾಯ ಸಂಹಿತಾ (BNS) ಅಡಿಯಲ್ಲಿ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದರೂ, ಮಲ್ಹೋತ್ರಾ ಅವರು ವಿಚಾರಣೆಯ ಸಮಯದಲ್ಲಿ ಶಾಂತವಾಗಿ ಕಾಣಿಸಿಕೊಂಡರು ಮತ್ತು ಯಾವುದೇ ಪಶ್ಚಾತ್ತಾಪವನ್ನು ತೋರಿಸಲಿಲ್ಲ. "ನನಗೆ ಯಾವುದೇ ಪಶ್ಚಾತ್ತಾಪವಿಲ್ಲ" ಎಂದು ಅವರು ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ, ಪಾಕಿಸ್ತಾನಿ ಕಾರ್ಯಕರ್ತರೊಂದಿಗೆ ಅವಳ ಸಂಪರ್ಕದ ವಿವರಗಳು ಹೊರಹೊಮ್ಮಿದವು.
ತನಿಖೆಯಲ್ಲಿ ಭಾಗಿಯಾಗಿರುವ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, ಜ್ಯೋತಿ ತಾನು ಯಾವುದೇ ತಪ್ಪು ಮಾಡಿಲ್ಲ ಎಂದು ಭಾವಿಸಿದ್ದಾಳೆ. ಈ ವೇಳೆ ಆಕೆ ಮಾಡಿರುವುದು ಸಮರ್ಥನೀಯವಾಗಿರುವುದಾಗಿ ಆಕೆ ನಂಬಿದ್ದಳೆ ಎಂದರು.