ನಿಷೇಧಾಜ್ಞೆ : ವಿವಿಧ ರಾಜ್ಯಗಳಲ್ಲಿ ಭುಗಿಲೆದ್ದ ಹಿಂಸಾಚಾರ

ಶನಿವಾರ, 1 ಏಪ್ರಿಲ್ 2023 (07:37 IST)
ಮುಂಬೈ : ದೇಶಾದ್ಯಂತ ಗುರುವಾರ ರಾಮನವಮಿ ಆಚರಿಸಲಾಯಿತು. ರಾಮನವಮಿ ಆಚರಣೆ ವೇಳೆ ಕೆಲವು ರಾಜ್ಯಗಳಲ್ಲಿ ಗುಂಪು ಘರ್ಷಣೆ ನಡೆದಿದ್ದು, ತೀವ್ರ ಹಿಂಸಾಚಾರಕ್ಕೆ ಕಾರಣವಾಗಿದೆ. ಇದರಿಂದ ಬಿಹಾರ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ (ಮುಂಬೈ) ಹಾಗೂ ಗುಜರಾತ್ ರಾಜ್ಯಗಳಲ್ಲಿ ವಿವಿಧೆಡೆ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ಘಟನಾ ಸ್ಥಳಗಳಲ್ಲಿ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
 
ಪಶ್ಚಿಮ ಬಂಗಾಳದ ಹೌರಾ ಜಿಲ್ಲೆ, ಗುಜರಾತ್ನ ವಡೋದರಾ, ಮುಂಬೈನ ಮಲವಾನಿ ಹಾಗೂ ಬಿಹಾರದ ಸಾರ್ಸಮ್ ಸೇರಿದಂತೆ ವಿವಿಧೆಡೆ ರಾಮನವಮಿ ಆಚರಣೆ ಸಂದರ್ಭದಲ್ಲಿ ನಡೆದ ಗುಂಪುಗಳ ನಡುವೆ ಘರ್ಷಣೆಯಿಂದ ಹಿಂಸಾಚಾರ ಭುಗಿಲೆದ್ದಿದೆ. 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಗುರುವಾರ ರಾತ್ರಿ ಹೌರಾದಲ್ಲಿ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ, ಹಲವಾರು ಮಳಿಗೆಗಳನ್ನ ಧ್ವಂಸಗೊಳಿಸಲಾಗಿದೆ. ಮಹಾರಾಷ್ಟ್ರದ ಔರಂಗಾಬಾದ್ ಮತ್ತು ಗುಜರಾತ್ನ ವಡೋದರದಲ್ಲಿಯೂ ಕಲ್ಲು ತೂರಾಟ ನಡೆದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ