ಶ್ರೀನಗರ : ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕಾಶ್ಮೀರದಲ್ಲಿ ಹಿಂದುತ್ವ ಅಜೆಂಡಾ ಪ್ರಚಾರ ಮಾಡುತ್ತಿದೆ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಕುಲ್ಗಾಮ್ನಲ್ಲಿರುವ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು `ರಘುಪತಿ ರಾಘವ ರಾಜಾ ರಾಂ ಹಾಡುತ್ತಿರುವ ವೀಡಿಯೋವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದ ಮುಫ್ತಿ, ಇದು ಕೇಂದ್ರ ಸರ್ಕಾರದ ಹಿಂದುತ್ವ ಅಜೆಂಡಾವನ್ನು ಸೂಚಿಸುತ್ತದೆ ಎಂದು ಆಕ್ಷೇಪಿಸಿದ್ದಾರೆ.
`ಧಾರ್ಮಿಕ ವಿದ್ವಾಂಸರನ್ನು ಜೈಲಿಗಟ್ಟುವುದು, ಜಮ್ಮಾ ಮಸೀದಿಯನ್ನು ಮುಚ್ಚುವುದು ಮತ್ತು ಶಾಲಾ ಮಕ್ಕಳಿಗೆ ಹಿಂದೂ ಸ್ತೋತ್ರ ಹಾಡಲು ನಿರ್ದೇಶಿಸುವುದು ಕಾಶ್ಮೀರದಲ್ಲಿ ಭಾರತ ಸರ್ಕಾರದ ನಿಜವಾದ ಹಿಂದುತ್ವವನ್ನು ಬಿಂಬಿಸಿದೆ ಎಂದು ಮುಫ್ತಿ ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.