ಕೋವಿಡ್ ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ನೀಡಿ: ಸುಪ್ರೀಂ

ಶುಕ್ರವಾರ, 4 ಫೆಬ್ರವರಿ 2022 (12:45 IST)
ನವದೆಹಲಿ : ಅರ್ಜಿ ಸಲ್ಲಿಕೆಯಾದ 10 ದಿನಗಳೊಳಗೆ ಕೋವಿಡ್ ಸಂತ್ರಸ್ತರ ಕುಟುಂಬದವರಿಗೆ ಪರಿಹಾರ ನೀಡಲು ಕ್ರಮವಹಿಸಬೇಕು ಎಂದು ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಕೊರೊನಾ ಸಂತ್ರಸ್ತರ ಕುಟುಂಬ ಸದಸ್ಯರಿಗೆ ಪರಿಹಾರ ಪಾವತಿಗೆ ಅನುಕೂಲವಾಗುವಂತೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ (ಎಸ್ಎಲ್ಎಸ್ಎ) ಸದಸ್ಯ ಕಾರ್ಯದರ್ಶಿಯೊಂದಿಗೆ ಸಮನ್ವಯ ಸಾಧಿಸಲು ನೋಡಲ್ ಅಧಿಕಾರಿಯನ್ನು ನೇಮಿಸುವಂತೆ ಕೋರ್ಟ್ ಸಲಹೆ ನೀಡಿದೆ. 

ನ್ಯಾಯಮೂರ್ತಿಗಳಾದ ಎಂ.ಆರ್.ಷಾ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ಪೀಠವು, ಇಂದಿನಿಂದ ಒಂದು ವಾರದೊಳಗೆ ಎಸ್ಎಲ್ಎಸ್ಎಗೆ ಹೆಸರು, ವಿಳಾಸ ಮತ್ತು ಮರಣ ಪ್ರಮಾಣ ಪತ್ರದಂತಹ ಸಂಪೂರ್ಣ ವಿವರಗಳನ್ನು ಹಾಗೂ ಅನಾಥರಿಗೆ ಸಂಬಂಧಿಸಿದ ವಿವರಗಳನ್ನು ನೀಡುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ