ಪುಲ್ವಾಮಾನಲ್ಲಿ ಮತ್ತೆ ಉಗ್ರರೊಂದಿಗೆ ಗುಂಡಿನ ಚಕಮಕಿ; ಹುತಾತ್ಮರಾದ ನಾಲ್ವರು ಯೋಧರು

ಸೋಮವಾರ, 18 ಫೆಬ್ರವರಿ 2019 (10:44 IST)
ಶ್ರೀನಗರ : ಪುಲ್ವಾಮಾ ಜಿಲ್ಲೆಯ ಪಿಂಗ್ಲಾನ್ ಪ್ರದೇಶದಲ್ಲಿ ಯೋಧರ ಹಾಗೂ ಉಗ್ರರ ನಡುವೆ ಅಹೋರಾತ್ರಿ ಭೀಕರ ಕಾಳಗ ನಡೆದಿದ್ದು, ಇದರಲ್ಲಿ ಸೇನಾ ಮೇಜರ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.

40 ಯೋಧರ ಬಲಿ ಪಡೆದ ಆದಿಲ್ ದಾರ್ ಗೆ ನೆರವು ನೀಡಿದ್ದ ಉಗ್ರರ ಬಗ್ಗೆ ಖಚಿತ ಮಾಹಿತಿಯ ಮೇರೆಗೆ 55 ರಾಷ್ಟ್ರೀಯ ರೈಫಲ್ಸ್ ರೆಜಿಮೆಂಟ್, ಪೊಲೀಸ್ ಮತ್ತು ಸಿಆರ್ ಪಿಎಫ್ ಒಳಗೊಂಡು ಭಾರತೀಯ ಸೇನೆಯ ಜಂಟಿ ಕಾರ್ಯಚರಣೆಯಲ್ಲಿ  ಆ ಪ್ರದೇಶವನ್ನು ಸುತ್ತುವರಿದು ದಾಳಿ ನಡೆಸಿದಾಗ ಉಗ್ರರು ಪ್ರತಿ ದಾಳಿ ನಡೆಸಿದ್ದಾರೆ.

 

ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ಸೇನಾ ಮೇಜರ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ದಾಳಿಯಲ್ಲಿ ಗಾಯಗೊಂಡವರನ್ನು ಬದಾಮಿಬಾಗ್ ನಲ್ಲಿರುವ ಸೇನೆಯ 92ನೇ ಬೇಸ್ ಹಾಸ್ಪಿಟಲ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ