ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿರುವ ನಾಡರ್ ಗ್ರಾಮದಲ್ಲಿ ಭದ್ರತಾ ಪಡೆಗಳು ಆರಂಭಿಸಿದ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆಯಲ್ಲಿ ಗುಂಡಿನ ಚಕಮಕಿ ಪ್ರಾರಂಭವಾಯಿತು.
ವರದಿಗಳ ಪ್ರಕಾರ ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕ ಗುಂಪಿಗೆ ಸೇರಿದ ಉಗ್ರರು ಎಂದು ಸೂಚಿಸಿವೆ. ಉಗ್ರರನ್ನು ಆಸಿಫ್ ಅಹ್ಮದ್ ಶೇಖ್, ಅಮೀರ್ ನಜೀರ್ ವಾನಿ ಮತ್ತು ಯವರ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ. ಅವರು ತಮ್ಮ ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಆಶ್ರಯ ಪಡೆಯುತ್ತಿರುವುದನ್ನು ಡ್ರೋನ್ ದೃಶ್ಯಾವಳಿಗಳು ಕಂಡುಬಂದಿದೆ.
ಶೋಪಿಯಾನ್ ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಮಂಗಳವಾರ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕರನ್ನು ಹೊಡೆದುರುಳಿಸಿದ ಕೆಲವೇ ದಿನಗಳಲ್ಲಿ ಇದು ಬಂದಿದೆ.