ದಲಿತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾದ ಯುವಕ

ಭಾನುವಾರ, 21 ಆಗಸ್ಟ್ 2016 (17:22 IST)
19 ವರ್ಷ ವಯಸ್ಸಿನ ದಲಿತ ಯುವತಿಯ ಮೇಲೆ ಯುವಕನೊಬ್ಬ ಅತ್ಯಾಚಾರವೆಸಗಿದ ಹೇಯ ಘಟನೆ ಜಿಲ್ಲೆಯ ನಿಹಾಲ್‌ಸಿಂಗ್ ವಾಲಾ ಪ್ರದೇಶದಲ್ಲಿ ನಡದಿದೆ. 
 
21 ವರ್ಷದ ಆರೋಪಿ ಹರಹಿಂದರ್ ಸಿಂಗ್, ದಲಿತ ಬಾಲಕಿಯನ್ನು ಒತ್ತಾಯಪೂರ್ವಕವಾಗಿ ತನ್ನ ಜೀಪ್‌ನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 
 
ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಬಳಿಕೆ ಆಕೆಯನ್ನು ಮನೆಯ ಬಳಿ ಬಿಟ್ಟು ಪರಾರಿಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.
 
ಬಾಲಕಿಯ ಪೋಷಕರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ವೈದ್ಯರು ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದನ್ನು ಖಚಿತಪಡಿಸಿದ್ದಾರೆ.
 
ಆರೋಪಿ ಪರಾರಿಯಾಗಿದ್ದು ಶೀಘ್ರದಲ್ಲಿಯೇ ಬಂಧಿಸುವ ವಿಶ್ವಾಸವಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ