ಸಿಎಂ ಜಯಲಲಿತಾ ಆರೋಗ್ಯದ ಮಾಹಿತಿ ಕೊಡಿ: ಕರುಣಾನಿಧಿ

ಶುಕ್ರವಾರ, 30 ಸೆಪ್ಟಂಬರ್ 2016 (18:27 IST)
ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆರೋಗ್ಯದ ಬಗ್ಗೆ ಉಹಾಪೋಹದ ವರದಿಗಳು ಹರಡುತ್ತಿರುವುದರಿಂದ ರಾಜ್ಯದ ಜನತೆಯಲ್ಲಿ ಆತಂಕ ಮೂಡಿಸಿದೆ. ಕೂಡಲೇ ತಮಿಳುನಾಡು ಸರಕಾರ ಅವರ ಆರೋಗ್ಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಬಹಿರಂಗಪಡಿಸಬೇಕು ಎಂದು ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಒತ್ತಾಯಿಸಿದ್ದಾರೆ.
 
ನಮ್ಮಿಬ್ಬರ ನಡುವೆ ಸೈದ್ದಾಂತಿಕ ಭಿನ್ನಾಭಿಪ್ರಾಯಗಳಿರಬಹುದು. ಆದರೆ, ಸಿಎಂ ಜಯಲಲಿತಾ ಬೇಗ ಚೇತರಿಕೆ ಕಂಡು ಎಂದಿನಂತೆ ತಮ್ಮ ಕರ್ತವ್ಯ ನಿರ್ವಹಿಸಲಿ ಎನ್ನುವುದೇ ನನ್ನ ಬಯಕೆಯಾಗಿದೆ ಎಂದು ತಿಳಿಸಿದ್ದಾರೆ.
 
ಕೆಲ ವ್ಯಕ್ತಿಗಳು ಅನಗತ್ಯವಾಗಿ ಜಯಲಲಿತಾ ಅವರ ಆರೋಗ್ಯದ ಬಗ್ಗೆ ಸಾಮಾಜಿಕ ಅಂತರ್ಜಾಲ ತಾಣಗಳಲ್ಲಿ ಉಹಾಪೋಹಗಳ ವರದಿಗಳನ್ನು ಹರಡುತ್ತಿದ್ದಾರೆ. ಆದ್ದರಿಂದ,ಜಯಲಲಿತಾ ಅವರ ಆರೋಗ್ಯದ ಬಗ್ಗೆ ಜನತೆಗೆ ಮಾಹಿತಿ ಕೊಡಿ ಎಂದು ಮನವಿ ಮಾಡಿದ್ದಾರೆ.    
 
68 ವರ್ಷ ವಯಸ್ಸಿನ ಮುಖ್ಯಮಂತ್ರಿ ಜಯಲಲಿತಾ ಸೆಪ್ಟೆಂಬರ್ 22 ರಂದು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ