ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಸಚಿವಾಲಯದಡಿ ಬರುವ ಫಾರ್ಮಾಎಕ್ಸಿಲ್ ಕಂಪೆನಿಯ ಮುಖ್ಯಸ್ಥರನ್ನಾಗಿ ನೇಮಕ ಮಾಡುವುದಾಗಿ ನಂಬಿಸಿ 2,17 ಕೋಟಿ ರೂ ವಂಚಿಸಿದ್ದಾರೆ ಎಂದು ಹೈದ್ರಾಬಾದ್ ಮೂಲದ ಉದ್ಯಮಿಯೊಬ್ಬರು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಜ್ಯ ಉಸ್ತುವಾರಿ ಹೊತ್ತಿರುವ ಪಿ.ಮುರಳಿಧರ್ ರಾವ್ ವಿರುದ್ಧ ವಂಚನೆ ಕೇಸ್ ದಾಖಲಿಸಿದ್ದಾರೆ.
ಆರೋಪಿ ಪಿ.ಮುರಳಿಧರ್ ರಾವ್ ವಿರುದ್ಧ 406, 420, 468, 471, 506 ಕಾಯ್ದೆಯಡಿ ಪಿ.ಮುರಳಿಧರ್ ರಾವ್ ಸೇರಿದಂತೆ ಒಂಬತ್ತು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.