ರಾಹುಲ್ ಫೇಕ್ ವೀಡಿಯೋ ವೈರಲ್! ಈ ವಿಡೀಯೋ ಮಾಡಿದ್ದಾದ್ರು ಯಾರು?

ಮಂಗಳವಾರ, 5 ಜುಲೈ 2022 (08:21 IST)
ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೆಲ ಬಿಜೆಪಿ ಶಾಸಕರು ನಕಲಿ ವೀಡಿಯೋವನ್ನು ಸೃಷ್ಟಿಸಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರು, ಬಿಜೆಪಿ ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಕೋಮು ಸೌಹಾರ್ದತೆ ಕದಡುವ ಉದ್ದೇಶದಿಂದ ರಾಹುಲ್ ಗಾಂಧಿ ಅವರ ನಕಲಿ ವೀಡಿಯೋವನ್ನು ಬಿಜೆಪಿಯ ಸಂಸದರಾದ ರಾಜ್ಯವರ್ಧನ್ ಸಿಂಗ್ ರಾಥೋಡ್ ಮತ್ತು ಸುಬ್ರತ್ ಪಾಠಕ್ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದರು. ಈ ಹಿನ್ನೆಲೆ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದೇವೆ ಎಂದು ಕಾಂಗ್ರೆಸ್ ಹೇಳಿದೆ.

ಛತ್ತೀಸ್ಗಢದ ಬಿಲಾಸ್ಪುರದಲ್ಲಿ ಸಂಸದರು ಮತ್ತು ಇತರ ಮೂವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪಕ್ಷದ ಪ್ರಚಾರ ತಂಡದ ಮುಖ್ಯಸ್ಥ ಪವನ್ ಖೇರಾ ಹೇಳಿದ್ದಾರೆ.

ದೆಹಲಿ, ಜಾರ್ಖಂಡ್, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಾಸ್ಥಾನ ಮತ್ತು ಉತ್ತರ ಪ್ರದೇಶದಲ್ಲೂ ಕಾಂಗ್ರೆಸ್ ಅವರ ವಿರುದ್ಧ ದೂರು ದಾಖಲಿಸಿದೆ ಎಂದು ಪವನ್ ಖೇರಾ ಮತ್ತು ಪಕ್ಷದ ಸಾಮಾಜಿಕ ಮಾಧ್ಯಮ ಉಸ್ತುವಾರಿ ಸುಪ್ರಿಯಾ ಶ್ರೀನಾಟೆ ಸುದ್ದಿಗಾರರಿಗೆ ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ