ಕರ್ನಾಟಕದ ಲೋಕಸಭಾ ಕ್ಷೇತ್ರದಲ್ಲೂ ಕಳ್ಳಾಟ ನಡೆದಿದೆ: ರಾಹುಲ್ ಗಾಂಧಿ ಗಂಭೀರ ಆರೋಪ

Krishnaveni K

ಬುಧವಾರ, 23 ಜುಲೈ 2025 (17:06 IST)
ನವದೆಹಲಿ: ಕಳೆದ ಲೋಕಸಭಾ ಚುನಾವಣೆ ವೇಳೆ ಕರ್ನಾಟಕದ 1 ಕ್ಷೇತ್ರದಲ್ಲೂ ಕಳ್ಳಾಟ  ನಡೆದಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಅವರು ಇಂದು ಸಂಸತ್ ಭವನದ ಬಳಿ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ.

ಚುನಾವಣೆಗಳಲ್ಲಿ ಅಕ್ರಮ ನಡೆಯುತ್ತಿದೆ ಎಂದು ರಾಹುಲ್ ಗಾಂಧಿ ಕೆಲವು ದಿನಗಳಿಂದ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆರೋಪಿಸುತ್ತಲೇ ಇದ್ದಾರೆ. ಲೋಕಸಭೆಯಲ್ಲೂ ಇದೇ ವಿಚಾರವಾಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಾಂಗ್ರೆಸ್ ಸಮಿತಿ ಈ ಬಗ್ಗೆ ಆಳವಾದ ಅಧ್ಯಯನ ನಡೆಸಿದೆ. ಇದರಲ್ಲಿ ಚುನಾವಣಾ ಅಕ್ರಮಗಳು ಬಯಲಾಗಿವೆ. ಸದ್ಯದಲ್ಲೇ ಇದನ್ನು ಜನರ ಮುಂದೆ ತೆರೆದಿಡಲಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಕಳ್ಳಾಟ ನಡೆದಿತ್ತು. ಅದೇ ರೀತಿ ಲೋಕಸಭೆ ಚುನಾವಣೆಯಲ್ಲೂ ಕಳ್ಳಾಟ ನಡೆದಿದೆ.

ವೋಟರ್ ಲಿಸ್ಟ್ ತೋರಿಸುವಂತೆ ನಾವು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೆವು. ಆದರೆ ಚುನಾವಣಾ ಆಯೋಗ ನಮ್ಮ ಮನವಿಗೆ ಕಿವಿಗೊಡಲಿಲ್ಲ. ಕೇವಲ ಮಹಾರಾಷ್ಟ್ರ ಮಾತ್ರವಲ್ಲ, ಕರ್ನಾಟಕದ 1 ಲೋಕಸಭಾ ಕ್ಷೇತ್ರದಲ್ಲೂ ಕಳ್ಳಾಟ ನಡೆದಿದೆ ಎಂದಿದ್ದಾರೆ. ಆದರೆ ಯಾವ ಕ್ಷೇತ್ರದಲ್ಲಿ ಎಂದು ಸ್ಪಷ್ಟಪಡಿಸಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ