ರಾಹುಲ್ ಗಾಂಧಿ ಮೇಲೆ ಹಲ್ಲೆ ಪ್ರಕರಣ; ರಾಹುಲ್ ಪರ ಬ್ಯಾಟ್ ಬೀಸಿದ ಹೆಚ್.ಡಿಡಿ
ಈ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ದೇವೇಗೌಡರು, ಕಾಂಗ್ರೆಸ್ ನಾಯಕರಿಗೆ ಹುಷಾರು ಎಂದು ಯುಪಿ ಸರ್ಕಾರಕ್ಕೆ ತಾಕೀತು ಮಾಡುವುದರ ಮೂಲಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಪರ ಬ್ಯಾಟ್ ಬೀಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಹೋರಾಟ ಒಂದು ಹಕ್ಕು. ನ್ಯಾಯಕ್ಕಾಗಿ ರಾಹುಲ್ ಗಾಂಧಿ ಹೋರಾಟ ಮಾಡಿದ್ದಾರೆ ಎಂದು ಟ್ವೀಟ್ ಮೂಲಕ ಬೆಂಬಲ ಸೂಚಿಸಿದ್ದಾರೆ.