ಕೊರೊನಾ ಟೆಸ್ಟಿಂಗ್ ಕಿಟ್ ಗಳ ಕೊರತೆ ಉಂಟಾಗಲು ಕೇಂದ್ರ ಸರ್ಕಾರವೇ ಕಾರಣ-ರಾಹುಲ್ ಗಾಂಧಿ ಆರೋಪ

ಬುಧವಾರ, 15 ಏಪ್ರಿಲ್ 2020 (07:07 IST)
ನವದೆಹಲಿ : ಕೊರೊನಾ ಟೆಸ್ಟಿಂಗ್ ಕಿಟ್ ಗಳ ಕೊರತೆ ಉಂಟಾಗಲು ಕೇಂದ್ರ ಸರ್ಕಾರವೇ ಕಾರಣ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.


ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಕೊರೊನಾ ಟೆಸ್ಟಿಂಗ್ ಕಿಟ್ ಗಳನ್ನು ಖರೀದಿಸುವಲ್ಲಿ ಕೇಂದ್ರ ಸರ್ಕಾರ ತಡ ಮಾಡಿದೆ. ಹೀಗಾಗಿ ಟೆಸ್ಟಿಂಗ್ ಕಿಟ್ ಗಳ ಕೊರತೆ ಉಂಟಾಗಿದೆ.  ಪ್ರತಿ  ಮಿಲಿಯನ್ ಭಾರತೀಯರಿಗೆ ಕೇವಲ 149 ಜನರನ್ನು ಟೆಸ್ಟ್ ಮಾಡುತ್ತಿದ್ದೇವೆ. ಲಾವೋಸ್ (157), ನೈಜರ್(182) ಹಾಗೂ ಹೊಂಡುರಾನ್ (162)ಗಳಂತಹ ಸಣ್ಣ ದೇಶಗಳ ರೀತಿ ಭಾರತದಲ್ಲಿ ಟೆಸ್ಟಿಂಗ್ ಆಗುತ್ತಿದೆ. ಸಾಮೂಹಿಕ ಪರೀಕ್ಷೆ ಕೊರೊನಾ ವಿರುದ್ಧ ಹೋರಾಟದ ಕೀಲಿ ಕೈ ಆಗಿದೆ. ಪ್ರಸ್ತುತ ಆಟದಲ್ಲಿ ನಾವು ಎಲ್ಲಿಯೂ ಇಲ್ಲ  ಎಂದು  ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ