ಮುಸ್ಲಿಂ ಲೀಗ್ ಜಾತ್ಯಾತೀತ ಪಕ್ಷ ಎಂದ ರಾಹುಲ್ ಗಾಂಧಿ

ಶನಿವಾರ, 3 ಜೂನ್ 2023 (11:29 IST)
ನವದೆಹಲಿ : ಕೇರಳದಲ್ಲಿ ಅಸ್ತಿತ್ವದಲ್ಲಿರುವ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಪಕ್ಷವನ್ನು ಜಾತ್ಯಾತೀತ ಪಕ್ಷ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಣ್ಣಿಸಿರುವುದು ಬಿಜೆಪಿ ಆಕ್ರೋಶಕ್ಕೆ ಕಾರಣವಾಗಿದೆ.
 
ವಾಷಿಂಗ್ಟನ್ ಡಿಸಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, ಮುಸ್ಲಿಂ ಲೀಗ್ ಸಂಪೂರ್ಣವಾಗಿ ಲೌಕಿಕವಾದದ ಪಕ್ಷವಾಗಿದೆ. ಮುಸ್ಲಿಂ ಲೀಗ್ನಲ್ಲಿ ನಾನ್ ಸೆಕ್ಯುಲರ್ ಅಂಶಗಳು ಇಲ್ಲ ಎಂದು ತಿಳಿಸಿದ್ದಾರೆ. ಈ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಮುಗಿಬಿದ್ದಿದೆ.

ನಮ್ಮ ದೇಶ ಧಾರ್ಮಿಕವಾಗಿ ಬೇರ್ಪಡಲು ಕಾರಣಕರ್ತರಾದ ಮಹ್ಮದ್ ಆಲಿ ಜಿನ್ನಾಗೆ ಸಂಬಂಧಿಸಿದ ಮುಸ್ಲಿಂ ಲೀಗ್ ಅನ್ನು ರಾಹುಲ್ ಗಾಂಧಿ ಜಾತ್ಯಾತೀತ ಎನ್ನುತ್ತಿದ್ದಾರೆ. ಅವರ ಮಾತುಗಳಲ್ಲಿ ಕಪಟತ್ವವೇ ತುಂಬಿದೆ. ವಯನಾಡ್ ಸಂಸದ ಸ್ಥಾನವನ್ನು ಮರುಸ್ಥಾಪಿಸಿಕೊಳ್ಳಲು ಹೀಗೆಲ್ಲಾ ಓಲೈಕೆ ರಾಜಕೀಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಟ್ವೀಟ್ ಮಾಡಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ