ಅಧ್ಯಕ್ಷ ರಾಹುಲ್ ಗಾಂಧಿ ಮಂಗಳವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು ರಚಿಸಿ ಅದರಲ್ಲಿ ಅನುಭವಿ ಹಾಗೂ ಯುವ ನಾಯಕರಿಗೆ ಸ್ಥಾನ ನೀಡಿದ್ದಾರೆ. ಆದರೆ ರಚನೆಯಾದ ಕಾಂಗ್ರೆಸ್ ವರ್ಕಿಂಗ್ ಕಮಿಟಿಯಲ್ಲಿರುವ 51 ಜನ ಸದಸ್ಯರಲ್ಲಿ ಕೇವಲ 7 ಸ್ಥಾನವನ್ನು ಮಹಿಳೆಯರಿಗೆ ನೀಡಿದ್ದಾರೆ. ಇದರಿಂದ ಇದೀಗ ರಾಹುಲ್ ಗಾಂಧಿ ಟೀಕೆಗೆ ಗುರಿಯಾಗಿದ್ದಾರೆ.
ಯಾಕೆಂದರೆ ಮುಂಗಾರು ಅಧಿವೇಶನದಲ್ಲಿ ಸಂಸತ್ತಿನಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ನೀಡುವ ಕುರಿತಂತೆ ಇರುವ ಮಹಿಳಾ ಮೀಸಲಾತಿ ವಿಧೇಯಕವನ್ನು ಮಂಡಿಸಬೇಕು ಎಂದು ಇತ್ತೀಚೆಗಷ್ಟೇ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಆದರೆ ಕಾಂಗ್ರೆಸ್ ವರ್ಕಿಂಗ್ ಕಮಿಟಿಯಲ್ಲಿ ಕೇವಲ 15% ಮಹಿಳೆಯರಿಗಷ್ಟೇ ಸ್ಥಾನ ನೀಡಿದ್ದು, ಈ ಕಾರಣಕ್ಕೆ ಈಗ ರಾಹುಲ್ ಗಾಂಧಿ ಲೇವಡಿಗೆ ಒಳಗಾಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ