ಮತದಾರರ ಪಟ್ಟಿಯಲ್ಲಿ ಗೋಲ್ಮಾಲ್ ನಡೀತಿದೆ, ಚರ್ಚೆಯಾಗಬೇಕು ಎಂದು ಆಗ್ರಹಿಸಿದ ರಾಹುಲ್ ಗಾಂಧಿ

Krishnaveni K

ಸೋಮವಾರ, 10 ಮಾರ್ಚ್ 2025 (15:31 IST)
ನವದೆಹಲಿ: ಮತದಾರರ ಪಟ್ಟಿಯಲ್ಲಿ ಗೋಲ್ ಮಾಲ್ ನಡೀತಿದೆ. ಈ ಬಗ್ಗೆ ಸಂಸತ್ ನಲ್ಲಿ ಚರ್ಚೆಯಾಗಬೇಕು ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು ಸಂಸತ್ ನಲ್ಲಿ ಆಗ್ರಹಿಸಿದ್ದಾರೆ.

ಇತ್ತೀಚೆಗೆ ನಡೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯೇ ಇದಕ್ಕೆ ಲೇಟೆಸ್ಟ್ ಉದಾಹರಣೆ. ಮತದಾರರ ಪಟ್ಟಿಯಲ್ಲಿ ಕೆಲವೊಂದು ವ್ಯತ್ಯಾಸಗಳು ಕಂಡುಬರುತ್ತಿವೆ. ಇದರ ಬಗ್ಗೆ ಚರ್ಚೆಯಾಗಬೇಕಿದೆ ಎಂದು ಅವರು ಆಗ್ರಹಿಸಿದ್ದಾರೆ.

ಎಲ್ಲಾ ರಾಜ್ಯಗಳ ಮತದಾರರ ಪಟ್ಟಿಯ ಬಗ್ಗೆ ಪ್ರಶ್ನೆಗಳು ಮೂಡುತ್ತಿವೆ. ಮಹಾರಾಷ್ಟ್ರದಲ್ಲಿ ಕಪ್ಪು,ಬಿಳುಪು ಮತದಾರರ ಪಟ್ಟಿಯಲ್ಲಿರುವ ಹೆಸರುಗಳು ಅನುಮಾನ ಹುಟ್ಟಿಸಿತ್ತು. ಹೀಗಾಗಿ ವಿಪಕ್ಷಗಳೆಲ್ಲವೂ ಈ ಬಗ್ಗೆ ಚರ್ಚೆಯಾಗಬೇಕು ಎಂದು ಆಗ್ರಹಿಸುತ್ತಿವೆ’ ಎಂದು ಅವರು ಹೇಳಿದ್ದಾರೆ.

ಚುನಾವಣಾ ಆಯೋಗದ ಜೊತೆ ಸೇರಿಕೊಂಡು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ನಕಲಿ ಮತದಾರರನ್ನು ಸೃಷ್ಟಿಸುತ್ತಿದೆ. ಈ ಮೂಲಕ ಎಲ್ಲಾ ಚುನಾವಣೆಗಳನ್ನು ಗೆಲ್ಲುತ್ತಿವೆ ಎಂಬುದು ವಿಪಕ್ಷಗಳ ಆರೋಪವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ