ಭಾರತೀಯ ಸೇನಾ ದಾಳಿ: ಮೊದಲ ಬಾರಿ ಮೋದಿಯನ್ನು ಹೊಗಳಿದ ರಾಹುಲ್ ಗಾಂಧಿ

ಶುಕ್ರವಾರ, 30 ಸೆಪ್ಟಂಬರ್ 2016 (14:07 IST)
ಉತ್ತರ ಕಾಶ್ಮಿರದ ಉರಿ ಸೇನಾ ಕೇಂದ್ರದ ಮೇಲೆ ಉಗ್ರರು ನಡೆಸಿದ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಸೀಮಿತ ದಾಳಿ ನಡೆಸಿದ್ದಕ್ಕೆ ಪ್ರಧಾನಿ ಮೋದಿ ಅಭಿನಂದನಾರ್ಹರು ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಮೊದಲ ಬಾರಿಗೆ ಪ್ರಧಾನಿಯನ್ನು ಹೊಗಳಿದ್ದಾರೆ.
 
ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಧಾನಿಯಾದ ನಂತರ ಮೊದಲ ಬಾರಿಗೆ ಅತ್ಯುತ್ತಮ ಕಾರ್ಯ ಮಾಡಿದ್ದಾರೆ. ಕೇಂದ್ರ ಸರಕಾರದ ನಿರ್ಧಾರ ಸ್ವಾಗತಾರ್ಹವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
 
ಕೇಂದ್ರ ಸರಕಾರದ ಧೋರಣೆಗಳ ವಿರುದ್ಧ ವಾಗ್ಧಾಳಿ ನಡೆಸುತ್ತಿದ್ದ ರಾಹುಲ್ ಗಾಂಧಿ, ಮೊದಲ ಬಾರಿಗೆ ಪ್ರಧಾನಿಯವರನ್ನು ಹೊಗಳಿರುವುದು ದೇಶದ ಭದ್ರತಾ ವಿಷಯದಲ್ಲಿ ಒಳ್ಳೆಯ ಬೆಳವಣಿಗೆಯಾಗಿದೆ ಎನ್ನಲಾಗಿದೆ.
 
ಸೂಟು ಬೂಟಿನ ಸರಕಾರ, ಪ್ರಧಾನಿ ಮೋದಿ ಕೈಗಾರಿಕೋದ್ಯಮಿಗಳ ಪರವಾಗಿದ್ದಾರೆ ಎಂದು ಕಿಡಿಕಾರುತ್ತಿದ್ದ ರಾಹುಲ್ ಗಾಂಧಿ, ಇಂದು ಪ್ರಧಾನಿ ಮೋದಿಯವರ ಕಾರ್ಯಕ್ಕೆ ಸ್ಪಂದಿಸುವುದು ದೇಶದ ರಾಜಕೀಯದಲ್ಲಿ ಹೊಸ ಮುನ್ನುಡಿ ಬರೆದಂತಾಗಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ