ಕಾಶ್ಮಿರ ಹಿಂಸಾಚಾರಕ್ಕೆ ಮೋದಿ ಸರಕಾರವೇ ಹೊಣೆ: ರಾಹುಲ್ ಗಾಂಧಿ

ಮಂಗಳವಾರ, 12 ಜುಲೈ 2016 (16:40 IST)
ಯುಪಿಎ ಸರಕಾರದ ಅವಧಿಯಲ್ಲಿ ಹೆಚ್ಚಳವಾಗಿದ್ದ ಜಮ್ಮು ಕಾಶ್ಮಿರದ ಪ್ರತಿಷ್ಠೆಯನ್ನು ನರೇಂದ್ರ ಮೋದಿ ಸರಕಾರದಿಂದ ಕಳೆದುಹೋಗಿದೆ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
 
ಯುಪಿಎ ಸರಕಾರದ ಅವಧಿಯಲ್ಲಿ ಸಹಬಾಳ್ವೆ, ಸಹೋದರತ್ವಕ್ಕೆ ಹೆಚ್ಚಿನ ಆದ್ಯತೆ ದೊರೆತಿತ್ತು. ಆದರೆ ಮೋದಿ ಸರಕಾರದ ಕೆಟ್ಟ ನೀತಿಗಳಿಂದಾಗಿ ಜಮ್ಮು ಕಾಶ್ಮಿರ ಕಣಿವೆಯಾದ್ಯಂತ ಆಂತಕ ಸೃಷ್ಟಿಯಾಗಲು ಕಾರಣವಾಗಿದೆ ಎಂದು ತಿಳಿಸಿದ್ದಾರೆ.
 
ಜಮೈತ್ ಉಲೇಮಾ-ಎ-ಹಿಂದ್ ಮುಖ್ಯಸ್ಥ ಮೌಲಾನಾ ಅಸಾದ್ ಮದನಿ ಆಯೋಜಿಸಿದ ಇದ್ ಮಿಲಾದ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಬಿಜೆಪಿ-ಪಿಡಿಪಿ ಮೈತ್ರಿಕೂಟ ಎಡವಿರುವುದೇ ಇಂದಿನ ಉದ್ರಿಕ್ತ ಸ್ಥಿತಿಗೆ ಕಾರಣವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಉಗ್ರ ಬುರ್ಹಾನ್ ವನಿ ಹತ್ಯೆಯ ನಂತರ ಕಾಶ್ಮಿರದಲ್ಲಿ ಭಾರಿ ಪ್ರಮಾಣದಲ್ಲಿ ಹಿಂಸಾಚಾರ ನಡೆದಿದ್ದು, ಕನಿಷ್ಠ 30 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು ನೂರಕ್ಕೂ ಹೆಚ್ಚಿನ ಜನರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಈದ್-ಮಿಲಾದ್ ಕಾರ್ಯಕ್ರಮದಲ್ಲಿ ಜೆಡಿಯು ಮುಖ್ಯಸ್ಥ ಶರದ್ ಯಾದವ್, ಸೀತಾರಾಮ್ ಯೆಚೂರಿ, ಸಿಪಿಐ(ಎಂ) ಮುಖಂಡ ಮೊಹಮ್ಮದ್ ಸಲೀಮ್, ಗುಲಾಮ್ ನಬಿ ಆಜಾದ್, ಸಲ್ಮಾನ್ ಖುರ್ಷಿದ್ ಮತ್ತು ಶ್ರೀ ಪ್ರಕಾಶ್ ಜೈಸ್ವಾಲ್ ಸೇರಿದಂತೆ ಇತರ ಮುಖಂಡರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ