ಬಿಜೆಪಿ ಪೋಸ್ಟರ್‌ಗಳಲ್ಲಿ ಭಾರತೀಯ ಸೇನೆ ಚಿತ್ರಕ್ಕೆ ವಿರೋಧ: ರಾಹುಲ್ ಗಾಂಧಿ

ಭಾನುವಾರ, 9 ಅಕ್ಟೋಬರ್ 2016 (16:03 IST)
ಪಾಕ್ ಆಕ್ರಮಿತ ಕಾಶ್ಮಿರದಲ್ಲಿ ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿಯ ಬಗ್ಗೆ ಪ್ರಧಾನಿ ಮೋದಿಯನ್ನು ಅಭಿನಂದಿಸಿದ್ದೇನೆ. ಆದರೆ, ರಾಜಕಾರಣಿಗಳಿರುವ ಪೋಸ್ಟರ್‌ಗಳಲ್ಲಿ ಸೇನೆಯ ಚಿತ್ರ ಬಳಕೆಯನ್ನು ವಿರೋಧಿಸಿದ್ದೇನೆ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
 
ಭಾರತೀಯ ಸೇನೆ ಸೀಮಿತ ದಾಳಿ ನಡೆಸಿದ ದಿನವೇ ನಾನು ಮೋದಿ ಸರಕಾರವನ್ನು ಸಂಪೂರ್ಣವಾಗಿ ಬೆಂಬಲಿಸಿದ್ದೇನೆ. ಬಿಜೆಪಿ ಪೋಸ್ಟರ್‌ಗಳಲ್ಲಿ ಭಾರತೀಯ ಸೇನೆ ಪೋಸ್ಟರ್‌ಗಳನ್ನು ದೇಶಾದ್ಯಂತ ಪ್ರಚಾರಕ್ಕಾಗಿ ಬಳಸುತ್ತಿರುವುದಕ್ಕೆ ನನ್ನ ಬೆಂಬಲವಿಲ್ಲ ಎಂದು ತಿಳಿಸಿದ್ದಾರೆ.
 
ಪ್ರಧಾನಿ ಮೋದಿ ರಕ್ತದ ದಲ್ಲಾಳಿಯಾಗಿದ್ದಾರೆ. ಹುತಾತ್ಮ ಸೈನಿಕರನ್ನು ರಾಜಕೀಯಕ್ಕಾಗಿ ಬಳಸುತ್ತಿದ್ದಾರೆ ಎನ್ನುವ ರಾಹುಲ್ ಆರೋಪಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ