ಇಂದಿನಿಂದ ರಾಹುಲ್ ಗಾಂಧಿ ಕೇರಳ ಪ್ರವಾಸ

ಶುಕ್ರವಾರ, 1 ಜುಲೈ 2022 (07:24 IST)
ತಿರುವನಂತಪುರಂ : ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಇಂದು ತಮ್ಮ ಕ್ಷೇತ್ರ ವಯನಾಡ್ಗೆ ಭೇಟಿ ನೀಡಲಿದ್ದಾರೆ.
 
ಮೂರು ದಿನಗಳ ಕಾಲ ವಯನಾಡ್ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರು, ತಮ್ಮ ಕ್ಷೇತ್ರದಲ್ಲಿ ಮನಂತವಾಡಿಯಲ್ಲಿ ರೈತರ ಬ್ಯಾಂಕ್ ಕಟ್ಟಡ ಉದ್ಘಾಟನೆ ಮತ್ತು ಸುಲ್ತಾನ್ ಬತ್ತೇರಿಯಲ್ಲಿ ಯುಡಿಎಫ್ ಬಹುಜನ ಸಂಗಮ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. 

ಶುಕ್ರವಾರ ಬೆಳಗ್ಗೆ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಕೆ ಸುಧಾಕರನ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಬರಮಾಡಿಕೊಳ್ಳಲಿದ್ದಾರೆ. ನಂತರ ಭಾನುವಾರ ಕೋಝಿಕ್ಕೋಡ್ನಿಂದ ದೆಹಲಿಗೆ ವಾಪಸಾಗಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ