ಕರುಣಾನಿಧಿಯನ್ನು ಭೇಟಿಯಾದ ರಾಹುಲ್ ಗಾಂಧಿ

ಶನಿವಾರ, 17 ಡಿಸೆಂಬರ್ 2016 (12:53 IST)
ಕಾಂಗ್ರೆಸ್ ಉಪಾದ್ಯಕ್ಷ ರಾಹುಲ್ ಗಾಂಧಿ ಶನಿವಾರ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆ ಡಿಎಂಕೆ ಮುಖ್ಯಸ್ಥ ಎಮ್. ಕರುಣಾನಿಧಿ (93) ಅವರನ್ನು ಭೇಟಿಯಾಗಿದ್ದಾರೆ. 

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ವೈಯಕ್ತಿಯವಾಗಿ ಅವರನ್ನು ಭೇಟಿಯಾಗಿ ಶೀಘ್ರ ಗುಣಮುಖರಾಗುವಂತೆ ಹಾರೈಸಬೇಕೆಂದು ಬಯಸಿದ್ದೆ. ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿರುವುದನ್ನು ನೋಡಲು ಸಂತೋಷವಾಗುತ್ತಿದೆ. ಮಾಜಿ ಸಿಎಂ ಸ್ಥಿತಿ ಸುಧಾರಿಸಿದ್ದು, ಆದಷ್ಟು ಬೇಗ ಮನೆಗೆ ಮರಳಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ ಎಂದಿದ್ದಾರೆ.
 
ಯುಪಿಎ ಅಧಿಕಾರದಲ್ಲಿದ್ದಾಗ ಡಿಎಂಕೆ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟದಲ್ಲಿತ್ತು.
 
ಗುರುವಾರ ತಡರಾತ್ರಿ ಉಸಿರಾಟದ ಸಮಸ್ಯೆಗೊಳಗಾದ ಅವರನ್ನು ತಕ್ಷಣ ನಗರದಲ್ಲಿರುವ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಅವರ ಉಸಿರಾಟವನ್ನು ಸುಗಮಗೊಳಿಸಲು, ಟ್ರ್ಯಾಕಿಯಾಸ್ಟಮಿ ಚಿಕಿತ್ಸೆಗೆ ಒಳಗಾಗಿದ್ದಾರೆ.
 
ನ್ಯೂಟ್ರಿಷನ್ ಮತ್ತು ಹೈಡ್ರೇಷನ್ ಸಪೋರ್ಟ್‌ಗಾಗಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಡಿಎಂಕೆ ಮುಖ್ಯಸ್ಥ ಒಂದು ವಾರದ ಚಿಕಿತ್ಸೆ ಬಳಿಕ ಡಿಸೆಂಬರ್ 8 ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಬಳಿಕ ಮನೆಯಲ್ಲಿಯೇ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ವೆಬ್ದುನಿಯಾವನ್ನು ಓದಿ