ಮಹದೇವಪುರ ಕ್ಷೇತ್ರದಲ್ಲಿ ಎಷ್ಟು ನಕಲಿ ಮತದಾರರಿದ್ದರು: ದಾಖಲೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ

Krishnaveni K

ಗುರುವಾರ, 7 ಆಗಸ್ಟ್ 2025 (16:32 IST)
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ಎರಡು ಕ್ಷೇತ್ರ ಸೇರಿದಂತೆ ಹಲವು ಕಡೆ ಮತಗಳ್ಳತನ ನಡೆದಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಪತ್ರಿಕಾಗೋಷ್ಠಿ ನಡೆಸಿ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

ನಾಳೆ ರಾಹುಲ್ ಗಾಂಧಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಈ ಕುರಿತು ಬೃಹತ್ ಪ್ರತಿಭಟನೆ ಸಮಾವೇಶ ಹಮ್ಮಿಕೊಂಡಿದ್ದಾರೆ. ಇದಕ್ಕೆ ಮೊದಲು ಇಂದು ರಾಹುಲ್ ಗಾಂಧಿ ಕೆಲವು ಅಂಕಿ ಅಂಶಗಳನ್ನು ಬಿಡುಗಡೆ ಮಾಡಿ ಅಕ್ರಮ ನಡೆದಿದೆ ಎಂದು ಪ್ರತಿಪಾದಿಸಿದ್ದಾರೆ.

ರಾಹುಲ್ ಇಂದು ನೀಡಿರುವ ಅಂಕಿ ಅಂಶಗಳಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರವೂ ಇದೆ. ಕರ್ನಾಟಕದಲ್ಲಿ 16 ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿತ್ತು. ಇಲ್ಲಿ ಕಾಂಗ್ರೆಸ್ ಕೇವಲ 6 ಸ್ಥಾನ ಗೆದ್ದಿತ್ತು. ಇದು ನಮಗೆ ಅಚ್ಚರಿಯುಂಟು ಮಾಡಿತು. ಹೀಗಾಗಿ ಕಡಿಮೆ ಅಂತರದಲ್ಲಿ ಸೋತ ಮಹದೇವಪುರದಲ್ಲಿ ಸಮೀಕ್ಷೆ ನಡೆಸಿದವು. ಆಗ ಅಕ್ರಮ ಬಯಲಾಗಿದೆ. ಇಲ್ಲಿ ಕಾಂಗ್ರೆಸ್ ಗಿಂತ ಬಿಜೆಪಿ 1,14,046 ಮತಗಖ ಅಂತರದಲ್ಲಿ ಗೆಲುವು ಸಾಧಿಸಿತ್ತು. ಈ ಪೈಕಿ 11,965 ನಕಲಿ ಮತದಾರರು, 40,0009 ನಕಲಿ ವಿಳಾಸದ ಮತಗಳು ಕಂಡುಬಂದಿವೆ ಎಂದು ರಾಹುಲ್ ಹೇಳಿದ್ದಾರೆ.

ಕರ್ನಾಟಕ, ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಅವರು ಚುನಾವಣೆ ಸಂದರ್ಭದಲ್ಲಿ ಹಲವು ನಕಲಿ ಮತದಾರರು ಮತಪಟ್ಟಿಗೆ ಸೇರ್ಪಡೆಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ