ಅಗ್ನಿವೀರರಿಗೆ ಒಟ್ಟು 1.13 ಕೋಟಿ ರೂ. ಪರಿಹಾರ ಸಿಗುತ್ತದೆ ಎಂದು ತಿಳಿಸುವ ಮೂಲಕ ರಾಹುಲ್ ಗಾಂಧಿ ಮಾಡಿರುವ ಆರೋಪ ಸುಳ್ಳು ಎಂದು ಸೇನೆ ಪರೋಕ್ಷವಾಗಿ ಹೇಳಿದೆ. ಸಿಯಾಚಿನ್‌ನಲ್ಲಿ ಹುತಾತ್ಮರಾದ ಅಗ್ನಿವೀರ್ ಅಕ್ಷಯ್ ಲಕ್ಷ್ಮಣ್‌ಗೆ ಸಂತಾಪ ಸೂಚಿಸಿದ್ದ ರಾಹುಲ್ ಗಾಂಧಿ, ಒಬ್ಬ ಯೋಧ ಹುತಾತ್ಮರಾಗಿದ್ದಾರೆ. ಆದರೆ ಅವರಿಗೆ ಯಾವುದೇ ಗ್ರಾಚ್ಯೂಟಿ ಇಲ್ಲ. ಮಿಲಿಟರಿ ಸೌಲಭ್ಯಗಳಿಲ್ಲ, ಕುಟುಂಬಕ್ಕೆ ಪಿಂಚಣಿ ಇಲ್ಲ ಎಂದು ಆರೋಪಿಸಿದ್ದರು. ಅಷ್ಟೇ ಅಲ್ಲದೇ ಭಾರತದ ವೀರರನ್ನು ಅಪಮಾನಿಸುವ ಯೋಜನೆ ಎಂದು ಕಿಡಿಕಾರಿದರು.