ನವದೆಹಲಿ: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಇಂದಿನಿಂದ ಭಾರತ್ ಜೋಡೋ ನ್ಯಾಯ್ ಯಾತ್ರಾ ಆರಂಭಿಸುತ್ತಿದೆ.
ಮಣಿಪುರದಿಂದ ಯಾತ್ರೆ ಆರಂಭವಾಗಲಿದೆ. ಮುಂಬರುವ ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಮತದಾರರನ್ನು ಸೆಳೆಯುವ ಉದ್ದೇಶದಿಂದ ಕಾಂಗ್ರೆಸ್ ಎರಡನೇ ಪಾದ ಯಾತ್ರೆಗೆ ಚಾಲನೆ ನೀಡುತ್ತಿದೆ.
ಕಳೆದ ಬಾರಿ ಭಾರತ್ ಜೋಡೋ ಯಾತ್ರೆ ನಡೆಸಲಾಗಿತ್ತು. ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಪಾದಯಾತ್ರೆ ನಡೆದಿತ್ತು. ಇದೀಗ ಮತ್ತೊಂದು ಸುತ್ತಿನ ಪಾದ ಯಾತ್ರೆ ನಡೆಸಲಾಗುತ್ತಿದೆ.
ಮಣಿಪುರದ ತೌಬಲ್ ಜಿಲ್ಲೆಯಲ್ಲಿ ಇಂದು ಯಾತ್ರೆಗೆ ಚಾಲನೆ ಸಿಗಲಿದೆ. ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ನಾಯಕರು ಉಪಸ್ಥಿತರಿರಲಿದ್ದಾರೆ. ಇನ್ನು, ಭಾರತ್ ನ್ಯಾಯ್ ಜೋಡೋ ಯಾತ್ರೆಗೆ ಕೈ ಜೋಡಿಸುವಂತೆ ಕಾಂಗ್ರೆಸ್ ತನ್ನ ಇಂಡಿಯಾ ಮೈತ್ರಿಕೂಟದ ಪಕ್ಷಗಳಿಗೂ ಆಹ್ವಾನವಿತ್ತಿದೆ.