ಇಂದು ದೇಶದ ಆರ್ಥಿಕ ತಜ್ಞ ರಘುರಾಮ್ ರಾಜನ್ ಜತೆ ರಾಹುಲ್ ಗಾಂಧಿ ಸಂವಾದ

ಗುರುವಾರ, 30 ಏಪ್ರಿಲ್ 2020 (10:45 IST)
ನವದೆಹಲಿ : ಕಾಂಗ್ರೆಸ್ ನಾಯಕ  ರಾಹುಲ್ ಗಾಂಧಿ ಇಂದು ಆರ್ ಬಿಐ ಮಾಜಿ ಗವರ್ನರ್ ಹಾಗೂ ದೇಶದ ಆರ್ಥಿಕ ತಜ್ಞ ರಘುರಾಮ್ ರಾಜನ್ ಜತೆ ಸಂವಾದ ನಡೆಸುತ್ತಿದ್ದಾರೆ.


ಕೊರೊನಾ ದಿಂದ ಇಡೀ ದೇಶ ಲಾಕ್ ಡೌನ್ ಮಾಡಿದ ಹಿನ್ನಲೆಯಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಆದಕಾರಣ ಈ ಬಗ್ಗೆ ರಾಹುಲ್ ಗಾಂಧಿ ದೇಶದ ಆರ್ಥಿಕ ತಜ್ಞರ ಜೊತೆ  ವಿಡಿಯೋ ಮೂಲಕ ಚರ್ಚೆ ನಡೆಸುತ್ತಿದ್ದಾರೆ.


ದೇಶದ ಆರ್ಥಿಕ ಪರಿಸ್ಥಿತಿ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ. ಹಾಗೇ ಕಾಂಗ್ರೆಸ್ ಪಕ್ಷದ ಟ್ವೀಟರ್, ಫೇಸ್ ಬುಕ್ ಖಾತೆಯಲ್ಲಿ ಈ ಬಗ್ಗೆ ವಿಡಿಯೋ ಅಪ್ಲೋಡ್ ಮಾಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ