‘ನನ್ನನ್ನು ಪಾಕಿಸ್ತಾನಕ್ಕೆ ಕಳಿಸಿದ್ದೇ ರಾಹುಲ್ ಗಾಂಧಿ’ -ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು

ಶನಿವಾರ, 1 ಡಿಸೆಂಬರ್ 2018 (08:18 IST)
ಹೈದರಾಬಾದ್ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದರಿಂದಲೇ ನಾನು ಪಾಕಿಸ್ತಾನಕ್ಕೆ ತೆರಳಿದ್ದೆ ಎಂದು ಮಾಜಿ ಕ್ರಿಕೆಟಿಗ ಹಾಗೂ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.


ಇತ್ತೀಚೆಗೆ ನಡೆದ ಕರ್ತಾರ್ ಪುರ್ ಕಾರಿಡಾರ್ ಯೋಜನೆ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸಲು ಮಾಜಿ ಕ್ರಿಕೆಟಿಗ, ರಾಜಕಾರಣಿ ನವಜೋತ್ ಸಿಂಗ್ ಸಿಧು ಪಾಕಿಸ್ತಾನಕ್ಕೆ ತೆರಳಿದ್ದರು. ಆದರೆ ಅಮೃತಸರ್ ನಲ್ಲಿ ನಡೆದ ಧಾರ್ಮಿಕ ಸಭೆ ಮೇಲೆ ಪಾಕ್ ಐಎಸ್ ಐ ಪ್ರಚೋದಿತ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದರು. ಹೀಗಾಗಿ ತಮ್ಮ ಸಂಪುಟ ಸಹೋದ್ಯೋಗಿಯಾಗಿರುವ ಸಿಧು ಪಾಕಿಸ್ತಾನಕ್ಕೆ  ತೆರಳುವ ಬಗ್ಗೆ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದರು.


ಆದರೆ ‘ರಾಹುಲ್ ಗಾಂಧಿ ನನ್ನ ನಾಯಕ. ಅವರೇ ನನ್ನನ್ನು ಪಾಕಿಸ್ತಾನಕ್ಕೆ ಕಳಿಸಿದ್ದರು’ ಎಂದು ಸಿಧು ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಸಿಧು ಪಾಕ್ ಭೇಟಿಯನ್ನು 50-100 ಕಾಂಗ್ರೆಸ್ ನಾಯಕರು ಬೆಂಬಲಿಸಿದ್ದಾಗಿ ಸಹ ಅವರು ಸಮರ್ಥನೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ