ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ

ಮಂಗಳವಾರ, 18 ಜುಲೈ 2023 (12:57 IST)
ನವದೆಹಲಿ : ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಒಳಪಟ್ಟಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿರುವ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಹೇಳಿದ್ದಾರೆ.

ಪ್ರಕರಣವನ್ನು ಶೀಘ್ರ ವಿಚಾರಣೆ ನಡೆಸುವಂತೆ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ರಾಹುಲ್ ಗಾಂಧಿ ಪರ ಮಂಗಳವಾರ ಮನವಿ ಮಾಡಿದರು. ಶುಕ್ರವಾರ ಅಥವಾ ಸೋಮವಾರ ವಿಚಾರಣೆಗೆ ಪಟ್ಟಿ ಮಾಡುವಂತೆ ಅಭಿಷೇಕ್ ಕೋರಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, ಶುಕ್ರವಾರ ವಿಚಾರಣೆಗೆ ಪಟ್ಟಿ ಮಾಡಲು ಸೂಚನೆ ನೀಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ