ಕೋರ್ಟ್ ಗೆ ಹಾಜರಾಗಲಿರುವ ರಾಹುಲ್ ಗಾಂಧಿ
ಆದರೆ ರಾಹುಲ್ ಬದಲಿಗೆ ಅವರ ಪರ ವಕೀಲರು ಕೋರ್ಟ್ ಗೆ ಹಾಜರಾಗಲಿದ್ದಾರೆ. 2014 ರಲ್ಲಿ ರ್ಯಾಲಿಯೊಂದರಲ್ಲಿ ರಾಹುಲ್, ಮಹಾತ್ಮಾ ಗಾಂಧಿ ಕೊಂದಿದ್ದು ಆರ್ ಎಸ್ಎಸ್ ಎಂದು ಹೇಳಿಕೆ ನೀಡಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಎಸ್ಎಸ್ ಸಂಘಟನೆ ರಾಹುಲ್ ಮೇಲೆ ಮಾನನಷ್ಟ ಮೊಕದ್ದಮೆ ಹೂಡಿತ್ತು. ಈ ಸಂಬಂಧ ಕಳೆದ ತಿಂಗಳು ವಿಚಾರಣೆ ನಡೆಸಿದ ನ್ಯಾಯಾಲಯ ಜೂನ್ 12 ರೊಳಗಾಗಿ ನ್ಯಾಯಾಲಯದ ಮುಂದೆ ಹಾಜರಾಗಿ ವಿಚಾರಣೆ ಎದುರಿಸುವಂತೆ ಆದೇಶ ನೀಡಿತ್ತು. ಅದರಂತೆ ಇಂದು ವಿಚಾರಣೆ ನಡೆಯಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.