ಉ.ಪ್ರದೇಶ ಕಾಂಗ್ರೆಸ್ ನಾಯಕರೊಂದಿಗೆ ರಾಹುಲ್ ಭೇಟಿ: ಚುನಾವಣಾ ರಣತಂತ್ರ

ಬುಧವಾರ, 2 ಮಾರ್ಚ್ 2016 (15:07 IST)
ಉತ್ರಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ, ಪಕ್ಷದ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ. ಚರ್ಚೆಯಲ್ಲಿ ಚುನಾವಣಾ ರಣತಂತ್ರಜ್ಞ ಪ್ರಶಾಂತ್ ಕಿಶೋರ್ ಕೂಡಾ ಪಾಲ್ಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಪ್ರಶಾಂತ್ ಕಿಶೋರ್, ಕಳೆದ 2014ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪರವಾಗಿ ಚುನಾವಣೆ ವ್ಯವಸ್ಥೆಯ ಹಿಂದಿನ ರೂವಾರಿಯಾಗಿದ್ದರು. ಬಿಹಾರ್ ವಿಧಾನಸಭೆ ಚುನಾವಣೆಯಲ್ಲಿ ನಿತೀಶ್ ಕುಮಾರ್ ಪರವಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಕಾಂಗ್ರೆಸ್ ಪಕ್ಷದ ಪರವಾಗಿ ಉತ್ತರಪ್ರದೇಶದ ಚುನಾವಣೆಯಲ್ಲಿ ರಣತಂತ್ರ ರೂಪಿಸಲಿದ್ದಾರೆ. 
 
ಇದಕ್ಕಿಂತ ಮೊದಲು, ಚುನಾವಣೆ ತಂತ್ರಜ್ಞರೊಂದಿಗೆ ಚರ್ಚೆ ನಡೆಸಿದ ನಂತರ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಗೆ ಪ್ರಶಾಂತ್ ಕಿಶೋರ್‌ರನ್ನು ಆಯ್ಕೆ ಮಾಡಲು ಕಾಂಗ್ರೆಸ್ ಪಕ್ಷ ನಿರ್ಧರಿಸಿತ್ತು.
 
ಪ್ರಶಾಂತ್ ಕಿಶೋರ್, ಚುನಾವಣೆ ರಣತಂತ್ರದ ವರದಿಯನ್ನು ನೇರವಾಗಿ ರಾಹುಲ್ ಗಾಂಧಿಯವರಿಗೆ ಮಾತ್ರ ಮಾಹಿತಿ ನೀಡಲಿದ್ದಾರೆ. ಪ್ರಿಯಾಂಕಾ ಗಾಂಧಿಯವರನ್ನು ಚುನಾವಣೆಯಲ್ಲಿ ಬಳಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ. 

ವೆಬ್ದುನಿಯಾವನ್ನು ಓದಿ