ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಇಂದು
ಇತ್ತೀಚೆಗಷ್ಟೇ ಕಾರ್ಯಕಾರಿ ಸಮಿತಿಗೆ ಸದಸ್ಯರಾಗಿ ಆಯ್ಕೆಯಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ವಿವಿಧ ರಾಜ್ಯಗಳ ಕಾಂಗ್ರೆಸ್ ನಾಯಕರು ಈ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
2019 ರ ಲೋಕಸಭೆ ಚುನಾವಣೆಗೆ ತಯಾರಿ ನಡೆಸುವುದರ ಬಗ್ಗೆ ಈ ಸಭೆಯಲ್ಲಿ ಮುಖ್ಯವಾಗಿ ಚರ್ಚೆಯಾಗಲಿದೆ. ಕೆಲವೊಂದು ಮೂಲಗಳ ಪ್ರಕಾರ ಸಿದ್ದರಾಮಯ್ಯರನ್ನು ಮಂಡ್ಯ ಅಥವಾ ಮೈಸೂರು ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಹೇಳಿ, ರಾಷ್ಟ್ರ ರಾಜಕಾರಣಕ್ಕೆ ಕಳುಹಿಸುವ ಉದ್ದೇಶವೂ ಇದೆ ಎನ್ನಲಾಗಿದೆ. ಅಂತೂ ಮುಂಬರುವ ಲೋಕಸಭೆ ದೃಷ್ಟಿಯಿಂದ ಕಾಂಗ್ರೆಸ್ ಗೆ ಈ ಸಭೆ ಮುಖ್ಯವಾಗಲಿದೆ.