ಸರ್ವೆ ವರದಿಯಂತೆ ವಿಧಾನಸಭೆ ಟಿಕೆಟ್ ಹಂಚಿಕೆಗೆ ರಾಹುಲ್ ನಿರ್ಧಾರ

ಮಂಗಳವಾರ, 23 ಮೇ 2017 (14:57 IST)
2018ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಭರದ ಸಿದ್ದತೆ ಆರಂಭಿಸಿದ್ದು, ಚುನಾವಣೆ ಪೂರ್ವಭಾವಿಯಾಗಿ ಸಮೀಕ್ಷೆ ನಡೆಸಲು ನಿರ್ಧರಿಸಿದೆ.
 
ಸರ್ವೆ ವರದಿಯನ್ನು ಆಧರಿಸಿ ಟಿಕೆಟ್ ಹಂಚಿಕೆಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ತೀರ್ಮಾನಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರೊಂದಿಗೆ ಫೋನ್‌ನಲ್ಲಿ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಸಮೀಕ್ಷೆಯಲ್ಲಿ ಗೆಲ್ಲುವ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ನೀಡಲು ಹೈಕಮಾಂಡ್ ತೀರ್ಮಾನಿಸಿದೆ ಎಂದು ಎಐಸಿಸಿ ಪದಾಧಿಕಾರಿಗಳು ತಿಳಿಸಿದ್ದಾರೆ. 
 
ಎಡೋಸ್‌ಪಿಯರ್ ಸಂಸ್ಥೆಯ ಮೂಲಕವೇ ಸಮೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಕಳೆದ 2013ರ ವಿಧಾನಸಭೆ ಚುನಾವಣೆಯಲ್ಲೂ ಇದೇ ಸಂಸ್ಥೆ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿತ್ತು. ವರದಿಯನ್ನು ಆಧರಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ